Health

ಎರಡನೇ ಅಲೆಗಿಂತ ಕಠಿಣವಾಗಿರುತ್ತಾ ಮೂರನೇ ಕೊರೊನಾ ಅಲೆ..?

ಬೆಂಗಳೂರು: ಎರಡನೇ ಕೊರೊನಾ ಅಲೆಗಿಂತ ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಿರುತ್ತದೆ ಎಂದು ತಜ್ಞರು ಹೇಳಿದ್ದಾರೆ. ಈ ಬಗ್ಗೆ ಹರಿಯಾಣ ಅಶೋಕ ವಿಶ್ವವಿದ್ಯಾಯಲದ ತಜ್ಞ ಎಚ್ಚರಿಕೆ ನೀಡಿದ್ದಾರೆ. ಈ ಬೆನ್ನಲ್ಲೇ ಕರ್ನಾಟಕ ರಾಜ್ಯದಲ್ಲಿ ಜನವರಿ ಅಂತ್ಯ ಹಾಗೂ ಫೆಬ್ರವರಿ ಮೊದಲ ವಾರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಮಟ್ಟದಲ್ಲಿ ಏರಿಕೆಯಾಗುತ್ತದೆ ಎಂದು ಇಂಡಿಯನ್‌ ಸ್ಟ್ಯಾಟಿಸ್ಟಿಕಲ್ ಇನ್‌ಸ್ಟಿಟ್ಯೂಟ್ ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ ತಜ್ಞರು ನಡೆಸಿರುವ ಅಧ್ಯಯನದಿಂದ ಬಯಲಾಗಿದೆ.
ರಾಜ್ಯದಲ್ಲಿ ಜನವರಿ ಕೊನೆಯ ವಾರದಲ್ಲಿ ನಿತ್ಯ ಕನಿಷ್ಠ 35 ಸಾವಿರ ಕೊವಿಡ್‌ ಪಾಸಿಟಿವ್‌ ಪ್ರಕರಣಗಳು ದಾಖಲಾಗಲಿವೆ. ಅದರ ಸಂಖ್ಯೆ 70 ಸಾವಿರಕ್ಕೂ ಏರುವ ಅಪಾಯವಿದೆ ಎಂದು ತಜ್ಞರು ಎಚ್ಚರಿಕೆ ಕೊಟ್ಟಿದ್ದಾರೆ. ಇನ್ನು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗಲಿದೆ. ಹೀಗಾಗಿ ಸರ್ಕಾರಗಳು ಈಗಲೇ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ತಜ್ಞರು ಸಲಹೆ ನೀಡಿದ್ದಾರೆ.
ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಮಾನ್ಯ ಸೇರಿ ಒಟ್ಟು 31,749 ಬೆಡ್‌ಗಳಿವೆ. ಇದ್ರಲ್ಲಿ ವಯಸ್ಕರದ್ದು 28,283 ಬೆಡ್‌ಗಳಿದ್ದರೆ, ಮಕ್ಕಳದ್ದು 3466 ಬೆಡ್‌ಗಳಿವೆ. ಇಷ್ಟು ಬೆಡ್‌ಗಳು ಸಾಕಾಗುವುದಿಲ್ಲ. ಹೀಗಾಗಿ ಖಾಸಗಿ ಆಸ್ಪತ್ರೆಗಳ ಬೆಡ್‌ಗಳು, ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿರುವ ಬೆಡ್‌ಗಳನ್ನು ಮೀಸಲಿಡಬೇಕು. ಜೊತೆಗೆ ಕೊವಿಡ್‌ ಕೇರ್‌ ಸೆಂಟರ್‌ಗಳನ್ನು ತೆರೆದು ಅದರಲ್ಲಿ ತಾತ್ಕಾಲಿಕ ಬೆಡ್‌ ವ್ಯವಸ್ಥೆ ಮಾಡಿದರೆ ಮಾತ್ರ ಪರಿಸ್ಥಿತಿ ನಿಭಾಯಿಸಲು ಸಾಧ್ಯ ಎಂದು ಹೇಳಲಾಗುತ್ತಿದೆ.

Share Post