ಕೆಸಿಆರ್‌ಗೆ ಲೆಫ್ಟ್ ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ; ಈಗ ಹೇಗಿದ್ದಾರೆ..?
ಹೈದರಾಬಾದ್; ತೆಲಂಗಾಣದ ಮಾಜಿ ಸಿಎಂ ಕೆ.ಚಂದ್ರಶೇಖರರಾವ್ ಅವರು ಎರಡು ದಿನದ ಹಿಂದೆ ಅವರ ತೋಟದ ಮನೆಯ ಬಚ್ಚಲಿನಲ್ಲಿ ಜಾರಿಬಿದ್ದು, ಸೊಂಟದ ಎಡ ಭಾಗದ ಮೂಳೆ ಮುರಿತಕ್ಕೆ ಒಳಗಾಗಿದ್ದರು. ಹೀಗಾಗಿ ಅವರನ್ನು ಹೈರಾಬಾದ್‌ನ ಯಶೋದಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ರಾತ್ರಿ ಅವರಿಗೆ ಲೆಫ್ಟ್ ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಕೆಸಿಆರ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ತಜ್ಞ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಆಸ್ಪತ್ರೆ ವತಿಯಿಂದಲೂ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಲಾಗಿದೆ.
ಶಸ್ತ್ರಚಿಕಿತ್ಸೆ ನಂತರ ಕೆಸಿಆರ್ ಅವರನ್ನು ವಿಶೇಷ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದ್ದು, ಅವರು ಸಾಕಷ್ಟು ಚೇತರಿಸಿಕೊಂಡಿದ್ದಾರೆ. ಇನ್ನೂ ಆರರಿಂದ ಎಂಟು ವಾರಗಳ ಕಾಲ ಅವರು ರೆಸ್ಟ್ ತೆಗೆದುಕೊಳ್ಳಬೇಕಾಗಿದೆ. ಕೆಸಿಆರ್ ಅವರಿಗೆ ನರ ನಾಳದ ಮೂಲಕ ದ್ರವಗಳು, ರೋಗನಿರೋಧಕ ಪ್ರತಿಜೀವಕಗಳು ಮತ್ತು ನೋವು ನಿವಾರಕ ಔಷಧಿಗಳನ್ನು ನೀಡಲಾಗ್ತಿದೆ ಎಂದು ವೈದ್ಯರು ಹೇಳಿದ್ದಾರೆ.