ಗಾನ ಕೋಗಿಲೆ ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಚೇತರಿಕೆ
ಮುಂಬೈ; ಗಾನ ಕೋಗಿಲೆ ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಆದರೂ ತಜ್ಞ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಮುಂದುವರೆಸಲಾಗುತ್ತಿದೆ ಎಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಇಂದು ಲತಾ ಮಂಗೇಶ್ಕರ್ ಅವರ ಆರೋಗ್ಯದ ಕುರಿತು ಬುಲೆಟಿವ್ ರಿಲೀಸ್ ಮಾಡಿರುವ ವೈದ್ಯರು, ಲತಾ ಮಂಗೇಶ್ಕರ್ ಅವರ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡಿದೆ ಎಂದು ಹೇಳಿದ್ದಾರೆ.
ಮೂರು ದಿನಗಳ ಹಿಂದೆ ಲತಾ ಅವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿತ್ತು. ಚಿಕಿತ್ಸೆ ಅವರು ಸ್ಪಂದಿಸುತ್ತಿದ್ದರು. ಇದೀಗ ಅವರ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂದಿದೆ. 92 ವರ್ಷದ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದ್ದವು. ಈ ಕಾರಣದಿಂದಾಗಿ ಅವರು ಜನವರಿ 9 ರಂದು ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಅಂದಿನಿಂದ ಅವರಿಗೆ ತಜ್ಞ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.