HealthNational

ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ 10 ಮಂದಿ ಸಾವು!

ಉತ್ತರಪ್ರದೇಶ; ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಭೀಕರ ಅಪಘಾತ ಸಂಭವಿಸಿದೆ.. ಲಾರಿಯೊಂದು ಟ್ರ್ಯಾಕ್ಟರ್‌ ಡಿಕ್ಕಿ ಹೊಡೆದಿದ್ದು, ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.. ಮೂವರು ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ.. ಎಲ್ಲರೂ ಕೂಲಿ ಕಾರ್ಮಿಕರಾಗಿದ್ದು, ಕೂಲಿ ಕೆಲಸಕ್ಕೆ ಹೋಗಿ ಟ್ರ್ಯಾಕ್ಟರ್‌ ನಲ್ಲಿ ಮನೆಗಳಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ..
ಟ್ರ್ಯಾಕ್ಟರ್‌ನಲ್ಲಿ 13 ಕಾರ್ಮಿಕರಿದ್ದರು.. ಮಿರ್ಜಾಪುರ-ವಾರಾಣಸಿ ಗಡಿಯ ಕಚವಾನ್‌-ಮಿರ್ಜಾಮುರಾದ್‌ ನಡುವೆ ಟ್ರ್ಯಾಕ್ಟರ್‌ ಪ್ರಯಾಣಿಸುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ.. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ ಟ್ರಾಲಿ ಮಗುಚಿಬಿದ್ದಿದ್ದು, 10 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.. ಗಾಯಗೊಂಡ ಮೂವರು ಕಾರ್ಮಿಕರನ್ನು ಬಿಹೆಚ್‌ಯು ಆಸ್ಪತ್ರೆಗೆ ಸೇರಿಸಲಾಗಿದೆ.. ಎಲ್ಲರೂ ಕೂಡಾ ಬಧೋಹಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡಿ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು ಎಂದು ತಿಳಿದುಬಂದಿದೆ..

Share Post