Health

ಶಾಸಕ ರಾಜಾ ವೆಂಕಟಪ್ಪ‌ನಾಯಕ ನಿಧನ; ಸಂತಾಪ

ಬೆಂಗಳೂರು; ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗಷ್ಟೇಷಲ ಅವರು ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್​ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಸುರಪುರ‌ದ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  ಹಿರಿಯ ಶಾಸಕರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ ಎಂದು ತಿಳಿಸಿದ್ದಾರೆ.

 ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಜನಾನುರಾಗಿ ಕಾಂಗ್ರೆಸ್ ಪಕ್ಷದಿಂದಲೇ ತಮ್ಮ ರಾಜಕೀಯ ಜೀವನ ಆರಂಭಿಸಿದ್ದರು.ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಭಗವಂತ ಅವರ ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.

ರಾಜಾ ವೆಂಕಟಪ್ಪ ನಾಯಕ ಅವರು ಕಟ್ಟಾ ಕಾಂಗ್ರೆಸ್‌ ನಾಯಕನಾಗಿಯೇ ಮುಂದುವರಿದಿದ್ದರು. ಕೆಲವು ದಿನದ ಹಿಂದಷ್ಟೇ ಉಗ್ರಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.ನಾಲ್ಕು ಬಾರಿ ಸುರಪುರ ಕ್ಷೇತ್ರ ಪ್ರತಿ‌ನಿಧಿಸಿದ್ದ ರಾಜಾ ವೆಂಕಟಪ್ಪ ನಾಯಕ ಅವರು ಸದಾ ಸಾಮಾಜಿಕ ಬದ್ದತೆ ಹೊಂದಿದ್ದರು ಎಂದು ಸಚಿವರು ಸ್ಮರಿಸಿದ್ದಾರೆ‌

Share Post