ಒಮಿಕ್ರಾನ್ ಬಗ್ಗೆ ಆತಂಕ ಬೇಡ; ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಹಾಗೂ ಕೊರೊನಾ ಸೋಂಕು ಹೆಚ್ಚು ಹರಡುತ್ತಿದೆ. ಆದ್ರೆ ಒಮಿಕ್ರಾನ್ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಕೊರೊನಾ ರೂಪಾಂತರಿ ಬಗ್ಗೆ ನಮಗೆ ಸ್ಪಷ್ಟ ಚಿತ್ರಣ ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವರ್ಚುಯಲ್ ಸಭೆ ನಡೆಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ದೇಶದಲ್ಲಿ ಶೇಕಡಾ ೯೦ ರಷ್ಟು ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ. ಮೂರು ಕೋಟಿ ಮಕ್ಕಳಿಗೂ ಲಸಿಕೆ ನೀಡಲಾಗಿದೆ ಎಂದು ಹೇಳಿದರು.
ದೇಶದಲ್ಲಿ ಟೆಲಿ ಮೆಡಿಸಿನ್ ಸೌಲಭ್ಯ ಒದಗಿಸಲಾಗಿದ್ದು, ಜನರಿಗೆ ಅನುಕೂಲವಾಗಿದೆ ಎಂದ ಮೋದಿ, ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸಗೆ ಆದ್ಯತೆ ನೀಡಬೇಕು ಎಂದರು. ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಸೋಂಕು ತಡೆಗೆ ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಮೋದಿ ಇದೇ ವೇಳೆ ಹೇಳಿದ್ದಾರೆ.