Health

Monkey disease; ಒಂದೇ ದಿನ 6 ಮಂದಿಗೆ ಮಂಗನ ಕಾಯಿಲೆ; ಹೆಚ್ಚಿದ ಆತಂಕ..!

ಶಿವಮೊಗ್ಗ; ರಾಜ್ಯದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಭಾಗಗಳಲ್ಲಿ ಮಂಗನ ಕಾಯಿಲೆ ಜನರನ್ನು ಸಾಕಷ್ಟು ಬಾಧಿಸುತ್ತಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹೆಚ್ಚು ಜನಕ್ಕೆ ಮಂಗನ ಕಾಯಿಲೆ ಬಾಧಿಸುತ್ತಿದೆ. ಇದರಿಂದಾಗಿ ಜನರಲ್ಲಿ ಆತಂಕ ಹೆಚ್ಚಾಗಿದೆ. ಸುತ್ತಮುತ್ತಲ ಜಿಲ್ಲೆಗಳಲ್ಲೂ ಮಂಗನ ಕಾಯಿಲೆ ಬಾಧಿಸುತ್ತಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಈಗಾಗಲೇ ಒಬ್ಬಳು ಯುವತಿ ಮಂಗನ ಕಾಯಿಲೆಗೆ ತುತ್ತಾಗಿದ್ದಾಳೆ. ಹೀಗಿರುವಾಗಲೇ ತೀರ್ಥಹಳ್ಳಿಯಲ್ಲಿ ಒಂದೇ ದಿನ ಆರು ಮಂದಿಗೆ ಮಂಗನ ಕಾಯಿಲೆ ಕಾಣಿಸಿಕೊಂಡಿದೆ.

ಇದನ್ನೂ ಓದಿ; Dairy Products; ಒಂದು ತಿಂಗಳು ಡೈರಿ ಉತ್ಪನ್ನ ತ್ಯಜಿಸಿ; ದೇಹದ ಬದಲಾವಣೆ ನೋಡಿ

ಒಂದೇ ದಿನ 6 ಮಂದಿ ಸೋಂಕು, ಆತಂಕ..!

ಒಂದೇ ದಿನ 6 ಮಂದಿ ಸೋಂಕು, ಆತಂಕ..!; ತೀರ್ಥಹಳ್ಳಿ ಪಟ್ಟಣವೊಂದರಲ್ಲೇ ಒಂದೇ ದಿನದಲ್ಲಿ ಆರು ಮಂದಿಗೆ ಮಂಗನ ಕಾಯಿಲೆ ಇರುವುದು ದೃಢಪಟ್ಟಿದೆ. ಆರು ಮಂದಿಯನ್ನು ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ಹೆಚ್ಚಾಗುತ್ತಿರುವುದರಿಂದ ಕಟ್ಟೆಚ್ಚರ ವಹಿಸಲಾಗಿದೆ. ರೋಗಿಗಳ ಸಂಪರ್ಕದಲ್ಲಿದ್ದ 42 ಮಂದಿಯ ರಕ್ತ ತಪಾಸಣೆ ಮಾಡಲಾಗಿದೆ. ಇದನ್ನೂ ಅದರ ವರದಿ ಬರಬೇಕಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ; Idli; ಇಡ್ಲಿ ತಿನ್ನೋದ್ರಿಂದ ಇಷ್ಟೆಲ್ಲಾ ಲಾಭಗಳಿವೆಯಾ..?

ಶಿವಮೊಗ್ಗ ಜಿಲ್ಲೆಯಲ್ಲಿ 32 ಪ್ರಕರಣಗಳು!

ಶಿವಮೊಗ್ಗ ಜಿಲ್ಲೆಯಲ್ಲಿ 32 ಪ್ರಕರಣಗಳು!; ಶಿವಮೊಗ್ಗ ಜಿಲ್ಲೆಯಲ್ಲಿ ಇಲ್ಲಿಯವರೆಗೆ 32 ಮಂದಿಗೆ ಸೋಂಕು ಇರುವುದು ಪತ್ತೆಯಾಗಿದೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ಈ ಕಾಯಿಲೆಯನ್ನು ತಡೆಗಟ್ಟಲು ಸಾಕಷ್ಟು ಶ್ರಮ ತೆಗೆದುಕೊಳ್ಳುತ್ತಿದೆ. ಎಲ್ಲಾ ಕಡೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುತ್ತಿದೆ. ಮನೆ ಮನೆಗೂ ಹೋಗಿ, ಜನರಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಲಾಗುತ್ತಿದೆ. ಹೀಗಿದ್ದರೂ ಕೂಡಾ ಜನರನ್ನು ಆತಂಕ ಮನೆ ಮಾಡಿದೆ.

ಈ ನಡುವೆ ಜಿಲ್ಲಾ ವೈದ್ಯಾಧಿಕಾರಿ ರಾಜೇಶ್ ಸುರಗಿಹಳ್ಳಿ ಅವರು ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿರುವ ಅವರು, ಯಾವುದೇ ಆತಂಕಪಡೆಬೇಕಾದ ಅವಶ್ಯಕತೆ ಇಲ್ಲ. ನಾವು ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಿದ್ದೇವೆ. ಎಲ್ಲರೂ ಧೈರ್ಯದಿಂದ ಇರಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

18 ವರ್ಷದ ಯುವತಿ ಸಾಸಾವನ್ನಪ್ಪಿರುವುದು ಆತಂಕಕ್ಕೆ ಕಾರಣ

18 ವರ್ಷದ ಯುವತಿ ಸಾಸಾವನ್ನಪ್ಪಿರುವುದು ಆತಂಕಕ್ಕೆ ಕಾರಣ; ಮಂಗನ ಕಾಯಿಲೆಗೆ ಇತ್ತೀಚೆಗೆ 18 ವರ್ಷದ ಯುವತಿ ಸಾವನ್ನಪ್ಪಿದ್ದಾಳೆ. ಇದರಿಂದಾಗಿ ಈ ಭಾಗದ ಜನರಲ್ಲಿ ಆತಂಕ ಮನೆ ಮಾಡುವಂತಾಗಿದೆ. ಹೊಸನಗರ ತಾಲೂಕಿನ ಅರಳಿಕೊಪ್ಪ ಬಳಿಯ ಬೊಪ್ಪನ ಮನೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ 18 ವರ್ಷದ ಯುವತಿ ಅನನ್ಯ ಎಂಬಾಕೆ ಮಂಗನ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾಳೆ. ಇದು ಮಂಗನ ಕಾಯಿಲೆಗೆ  ಸಾವನ್ನಪ್ಪಿದ ಜಿಲ್ಲೆಯ ಮೊದಲ ಪ್ರಕರಣ.

ಯುವತಿ ಅನನ್ಯಾ ಚಳಿ ಹಾಗೂ ಜ್ವರದಿಂದ ಬಳಲುತ್ತಿದ್ದಳು. ಹೀಗಾಗಿ ಆಕೆಯನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಅಲ್ಲಿ ಸೀರಿಯಸ್‌ ಆಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್‌ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅನನ್ಯಾ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ; Vitamin-D; ಬೆಂಗಳೂರಿನ ಶೇ.95 ಮಂದಿಗೆ Vitamin-D ಕೊರತೆ; ಬೇಗ ಎದ್ದು ಬಿಸಿಲಿಗೆ ಮೈ ಒಡ್ಡಿ!

ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಂಗನ ಕಾಯಿಲೆ ಭೀತಿ!

ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಂಗನ ಕಾಯಿಲೆ ಭೀತಿ!; ಚಿಕ್ಕಮಗಳೂರು ಜಿಲ್ಲೆಯಲ್ಲೂ ಹಲವು ದಿನಗಳಿಂದ ಮಂಗನ ಕಾಯಿಲೆ ಭೀತಿಯನ್ನುಂಟು ಮಾಡುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಒಂಬತ್ತು ಮಂದಿಗೆ ಮಂಗನ ಕಾಯಿಲೆ ಇತ್ತು. ಇದರಲ್ಲಿ ಓರ್ವ ಸೋಂಕಿತ ಸಾವನ್ನಪ್ಪಿದ್ದಾನೆ.
ಅತಿ ಹೆಚ್ಚು ಪ್ರಕರಣಗಳು ಕೊಪ್ಪ ತಾಲೂಕಿನ ಒಎಲ್‌ವಿ ಎಸ್ಟೇಟ್ ಭಾಗದಲ್ಲಿ ಪತ್ತೆಯಾಗಿವೆ. ಹೀಗಾಗಿ ಆರೋಗ್ಯ ಇಲಾಖೆಯು ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕೆಎಫ್​ಡಿ ವಾರ್ಡ್ ತೆರೆದಿದೆ.

 

Share Post