ಸಂಸದ ಶ್ರೀನಿವಾಸ ಪ್ರಸಾದ್ ಗೆ ಅನಾರೋಗ್ಯ; ಬೆಂಗಳೂರಿನ ಆಸ್ಪತ್ರೆಗೆ ದಾಖಲು
ಬೆಂಗಳೂರು; ಚುನಾವಣೆ ಹೊಸ್ತಿಲಲ್ಲೇ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ಅನಾರೋಗ್ಯಕ್ಕೀಡಾಗಿದ್ದಾರೆ.. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಲಿನಲ್ಲಿ ಗಾಯ ಉಲ್ಬಣವಾಗಿದೆ.. ಈ ಕಾರಣದಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ವೆಂಟಿಲೇಟರ್ ನಲ್ಲಿಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ.. ನಿನ್ನೆ ರಾತ್ರಿಯೇ ಮೈಸೂರಿನಿಂದ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ. ಡಾ.ಸುದರ್ಶನ್ ಬಲ್ಲಾಳ್ ಅವರು ಶ್ರೀನಿವಾಸ ಪ್ರಸಾದ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ..
ಶ್ರೀನಿವಾಸ ಪ್ರಸಾದ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ.. ಎರಡು ದಿನ ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತದೆ.. ಅನಂತರ ವಾರ್ಡ್ ಗೆ ಶಿಫ್ಟ್ ಮಾಡುತ್ತೇವೆ ಎಂದು ವೈದ್ಯರು ತಿಳಿಸಿದ್ದಾರೆ..