Health

ನಳಿನ್‌ ಕುಮಾರ್‌ ಕಟೀಲ್‌ಗೆ ಕೊರೊನಾ ಪಾಸಿಟಿವ್

ಬೆಂಗಳೂರು : ಬಿಜೆಪಿ ರಾಜ್ಯಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ನಳಿನ್‌ ಕುಮಾರ್‌ ಕಟೀಲ್‌ ಅವರೇ ಸಾಮಾಜಿಕ ಜಾಲತಾಣದಲ್ಲಿ ತಮಗೆ ಪಾಸಿಟಿವ್‌ ಬಂದಿರುವುದಾಗಿ ಹೇಳಿಕೊಂಡಿದ್ದಾರೆ. ಇನ್ನು ನನ್ನ ಸಂಪರ್ಕಕ್ಕೆ ಬಂದವರೆಲ್ಲಾ ದಯಮಾಡಿ ಟೆಸ್ಟ್‌ ಮಾಡಿಸಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.

ಟ್ವೀಟ್‌ ನಲ್ಲಿ ಏನಿದೆ ?

ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಸಚಿವ ಆರ್‌ ಅಶೋಕ್‌ ಅವರಿಗೆ ಕೊರೊನಾ ದೃಢವಾಗಿತ್ತು. ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕಟೀಲ್‌ ಅವರಿಗೆ ಯಾವುದೇ ಗುಣ ಲಕ್ಷಣಗಳು ಇಲ್ಲದ ಕಾರಣ ಮನೆಯಲ್ಲಿಯೇ ಐಸೋಲೇಟ್‌ ಆಗಲು ನಿರ್ಧರಿಸಿದ್ದಾರೆ.

ಮೂರನೇ ಅಲೆಯು ವ್ಯಾಪಕವಾಗಿ ಹರಡುತ್ತಿದ್ದು ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇನ್ನು ಸರ್ಕಾರ ಕೋವಿಡ್‌ ನಿಯಂತ್ರಿಸಲು ಇಂದಿನಿಂದ ದೇಶಾದ್ಯಂತ ಬೂಸ್ಟರ್‌ ಡೋಸ್‌ ಅಭಿಯಾನಕ್ಕೆ ಚಾಲನೆ ನೀಡಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು 60 ವರ್ಷ ತುಂಬಿದವರು ಹಾಕಿಸಿಕೊಳ್ಳುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

 

Share Post