ಒಮಿಕ್ರಾನ್ ಭೀತಿ; ಸಂಜೆ ವೇಳೆಗೆ ಹೊಸ ಮಾರ್ಗಸೂಚಿ ಪ್ರಕಟ ಸಾಧ್ಯತೆ
ಬೆಂಗಳೂರು: ದಕ್ಷಿಣ ಆಫ್ರಿಕಾ ಸೇರಿ ಹಲವು ದೇಶಗಳಲ್ಲಿ ಒಮಿಕ್ರಾನ್ ಕೊರೋನಾ ರೂಪಾಂತರಿ ತಳಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಇದರ ಭಾಗವಾಗಿ ರಾಜ್ಯದಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಹಲವು ಮಹತ್ವದ ವಿಷಯಗಳು ಚರ್ಚಿಸಿದ್ದು, ಸಂಜೆ ವೇಳೆಗೆ ಹೊಸ ಗೈಡ್‌ಲೈನ್ಸ್ ಪ್ರಕಟವಾಗುವ ಸಾಧ್ಯತೆ ಇದೆ.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಕೆ. ಸುದರ್ಶನ್ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರಸಕ್ತ ಕೊವಿಡ್ ಬೆಳವಣಿಗೆಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು.