Health

ಡಿಸೆಂಬರ್‌ 28 ರಿಂದ ರಾಜ್ಯದಲ್ಲಿ 10 ದಿನ ನೈಟ್‌ ಕರ್ಫ್ಯೂ

ಬೆಂಗಳೂರು: ಒಮಿಕ್ರಾನ್‌ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿರುವುದರಿಂದ ರಾಜ್ಯದಲ್ಲಿ ಡಿಸೆಂಬರ್‌ 28 ರಿಂದ ಹತ್ತು ದಿನ ನೈಟ್‌ ಕರ್ಫ್ಯೂ ಜಾರಿ ಮಾಡಲಾಗಿದೆ.  ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯ ನಂತರ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.

ಮಂಗಳವಾರದಿಂದ ನೈಟ್‌ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೂ ನೈಟ್‌ ಕರ್ಫ್ಯೂ ಇರಲಿದೆ ಎಂದು ಸಿಎಂ ಸಭೆ ಬಳಿಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಹೋಟೆಲ್‌, ಬಾರ್‌, ಪಬ್‌ಗಳಲ್ಲಿ ಶೇ.50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಜೊತೆಗೆ ಎಲ್ಲೂ ಗುಂಪು ಸೇರಿವಂತಿಲ್ಲ. ಹೊರಾಂಗಣದಲ್ಲಿ ಹೊಸ ವರ್ಷಾಚರಣೆ ಮಾಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ. ಇನ್ನು ಸದ್ಯಕ್ಕೆ ಸಿನಿಮಾ ಥಿಯೇಟರ್​ಗಳಿಗೆ 50-50 ನಿಮಯ ಅನ್ವಯವಾಗುವುದಿಲ್ಲ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಕಂದಾಯ ಸಚಿವ R.ಅಶೋಕ್, ಗೃಹ ಸಚಿವ ಆರಗ ಜ್ಞಾನೇಂದ್ರ,  ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ.ಎಂ.ಕೆ.ಸುದರ್ಶನ್ ಸೇರಿದಂತೆ ಹಲವು ಭಾಗಿಯಾಗಿದ್ದರು.

Share Post