ಒಮಿಕ್ರಾನ್ ಭೀತಿ; ಮಧ್ಯಪ್ರದೇಶದಲ್ಲಿ ರಾತ್ರಿ ಕರ್ಫ್ಯೂ ಜಾರಿ
ಭೋಪಾಲ್: ಒಮಿಕ್ರಾನ್ ಪ್ರಕರಣಗಳು ದೇಶದೆಲ್ಲಡೆ ಹೆಚ್ಚಾಗುತ್ತಿವೆ. ಮಧ್ಯಪ್ರದೇಶದಲ್ಲೂ ಒಮಿಕ್ರಾನ್ ಭೀತಿ ಎದುರಾಗಿದೆ. ಹೀಗಾಗಿ ಮಧ್ಯಪ್ರದೇಶದಲ್ಲಿ ರಾತ್ರಿ ಕರ್ಫ್ಯೂ ಜಾರಿಗೆ ತರಲಾಗಿದೆ. ರಾತ್ರಿ 11ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ.
ಮಧ್ಯಪ್ರದೇಶದಲ್ಲಿ ಕೋವಿಡ್–19 ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜನರಿಗೆ ಸೂಚಿಸಲಾಗಿದೆ. ಮಧ್ಯಪ್ರದೇಶದಲ್ಲಿ ಈವರೆಗೆ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿಲ್ಲ. ಆದರೂ ಮಧ್ಯಪ್ರದೇಶ ಸರ್ಕಾರ ಮಂಜಾಗ್ರತಾ ಕ್ರಮ ಕೈಗೊಂಡಿದೆ.
ಇನ್ನು ಕೇಂದ್ರ ಸರ್ಕಾರ ಕೂಡ ಮಾರ್ಗಸೂಚಿ ಪ್ರಕಟಿಸಿದೆ. ಹೀಗಾಗಿ ನಾವು ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದೇವೆ. ಅಗತ್ಯವೆನಿಸಿದಲ್ಲಿ ಇನ್ನಷ್ಟು ಕ್ರಮ ಕೈಗೊಳ್ಳಲಿದ್ದೇವೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.