ದೆಹಲಿಯಲ್ಲಿ ಒಮಿಕ್ರಾನ್ ಪ್ರಕರಣ; ದೇಶದಲ್ಲಿ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ
ದೆಹಲಿ: ದೇಶದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪಪತ್ತೆಯಾಗಿದೆ. ದೆಹಲಿಯಲ್ಲಿ ಇಬ್ಬ ವ್ಯಕ್ತಿಗೆ ಒಮಿಕ್ರಾನ್ ಇರುವುದು ಜಿನೋಮ್ ಸೀಕ್ವೆನ್ಸಿಂಗ್‌ನಿಂದ ಖಾತ್ರಿಯಾಗಿದೆ.
ತಾಂಜೇನಿಯಾದಿಂದ ಬಂದಿದ್ದ 12 ಮಂದಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದರು. ಇವರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದರಲ್ಲಿ ಇಬ್ಬರಿಗೆ ಒಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿದೆ.
ಭಾರತದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಇಬ್ಬರಿಗೆ ಒಮಿಕ್ರಾನ್ ಸೋಂಕು ಇರುವುದು ಪತ್ತೆಯಾಗಿತ್ತು. ಇದಾದ ಮೇಲೆ ಗುಜರಾತ್‌ನಲ್ಲಿ ವ್ಯಕ್ತಿಯೊಬ್ಬರಿಗೆ ಒಮಿಕ್ರಾನ್ ಇರುವುದು ಖಾತ್ರಿಯಾಗಿತ್ತು. ನಂತರ ಮಹಾರಾಷ್ಟ್ರದಲ್ಲಿ ಒಂದು ಪ್ರಕರಣ ಕಂಡುಬಂದಿತ್ತು. ಇದೀಗ ದೆಹಲಿಯಲ್ಲೂ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.