ದೇಶದಲ್ಲಿ ಕೊರೊನಾ ಹೆಚ್ಚಳ; ಅಧಿಕಾರಿಗಳಿಂದ ಮಾಹಿತಿ ಪಡೆದ ಪ್ರಧಾನಿ
ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಹತ್ವದ ಸಭೆ ನಡೆಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರಾಜ್ಯಗಳಲ್ಲಿ ಕೊವಿಡ್ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು.ʼ
ರಾಜ್ಯಗಳೊಂದಿಗೆ ಸಮನ್ವಯ ಕಾಪಾಡಿಕೊಳ್ಳಬೇಕೆಂದು ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದ ಪ್ರಧಾನಿ ಮೋದಿ, 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕುವ ಅಭಿಯಾನ ಚುರುಕುಗೊಳಿಸಲು ಸೂಚನೆ ನೀಡಿದ್ದಾರೆ. ಇನ್ನೂ ಎಲ್ಲಾ ಜಿಲ್ಲೆಗಳಲ್ಲಿ ಸೋಂಕಿತರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆಯಾಗಬೇಕು. ಜಿಲ್ಲಾ ಕೇಂದ್ರಗಳಲ್ಲಿ ಆರೋಗ್ಯ ಮೂಲ ಸೌಕರ್ಯಗಳನ್ನು ಹೆಚ್ಚು ಮಾಡಬೇಕೆಂದು ಸೂಚಿಸಿದರು ಎನ್ನಲಾಗಿದೆ.