ಪ್ರಧಾನಿ ಮೋದಿ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಆಸ್ಪತ್ರೆಗೆ ದಾಖಲು
ಚೆನ್ನೈ; ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅನಾರೋಗ್ಯಕ್ಕೀಡಾಗಿದ್ದಾರೆ. ಈ ಕಾರಣಕ್ಕಾಗಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಪ್ರಹ್ಲಾದ್ ಮೋದಿಯವರು ಕಿಡ್ನಿ ಸಂಬಂಧಿ ಕಾಯಿಕೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಚೆನ್ನೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಹ್ಲಾದ್ ಮೋದಿ ನಾಲ್ಕನೇಯವರಾಗಿದ್ದು, ಅಹಮದಾಬಾದ್‌ನಲ್ಲಿ ಟೈರ್ ಶೋರೂಂ ನಡೆಸುತ್ತಿದ್ದಾರೆ.