ಖ್ಯಾತ ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು; ಐಸಿಯುನಲ್ಲಿ ಚಿಕಿತ್ಸೆ
ಮುಂಬೈ; ಟಾಟಾ ಕಂಪನಿ ಮಾಲೀಕ, ದೇಶದ ಖ್ಯಾತ ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರಾಗಿದೆ.. ಹೀಗಾಗಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.. ವಯೋಸಹಜ ಸಮಸ್ಯೆಯಿಂದ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದೇನೆ. ಆತಂಕ ಬೇಡ ಎಂದು ರತನ್ ಟಾಟಾ ಹೇಳಿದ್ದಾರೆ..
86 ವರ್ಷ ವಯಸ್ಸಿನ ರತನ್ ಟಾಟಾ ಅವರ ಬಿಪಿ ಗಣನೀಯವಾಗಿ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಅವರ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.. ಸದ್ಯ ರತನ್ ಟಾಟಾ ಅವರೇ ಪ್ರತಿಕ್ರಿಯೆ ಕೊಟ್ಟಿದ್ದಾರೆ.. ನನ್ನ ಆರೋಗ್ಯದ ಬಗ್ಗೆ ವದಂತಿಗಳು ಹಬ್ಬಿವೆ.. ಆದ್ರೆ ನಾನು ವಯೋಸಹಜ ಸಮಸ್ಯೆಗಳ ಕಾರಣದಿಂದ ತಪಾಸಣೆಗೆ ಬಂದಿದ್ದೇನೆ.. ನಾನು ಈ ಹಿಂದಿನ ಉತ್ಸಾಹದಲ್ಲೇ ಇರುತ್ತೇನೆ. ಯಾವುದೇ ಕಾರಣಕ್ಕೂ ತಪ್ಪು ಮಾಹಿತಿ ಹರಡಬೇಡಿ ಎಂದು ರತನ್ ಟಾಟಾ ಹೇಳಿಕೊಂಡಿದ್ದಾರೆ..