HealthNational

ಕ್ರಿಕೆಟಿಗ ರಿಷಬ್‌ ಪಂತ್‌ ಮುಂಬೈಗೆ ಏರ್‌ ಲಿಫ್ಟ್‌

ಡೆಹ್ರಾಡೂನ್; ಇತ್ತೀಚೆಗಷ್ಟೇ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಟೀಂ ಇಂಡಿಯಾ ಾಟಗಾರ ರಿಷಭ್ ಪಂತ್‍ರನ್ನು ಮುಂಬೈಗೆ ಏರ್‌ ಲಿಫ್ಟ್‌ ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ರಿಷಬ್‌ ಪಂತ್‌ ಅವರನ್ನು ಮುಂಬೈಗೆ ಕರೆತರಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಡಿಸೆಂಬರ್‌ 30 ರಂದು ರಿಷಬ್‌ ಪಂತ್‌ ಅವರು ಉತ್ತರಾಖಂಡದಿಂದ ದೆಹಲಿಗೆ ಬರುತ್ತಿದ್ದರು. ಈ ವೇಳೆ ಹಮ್ಮಲ್‍ಪುರ ಝಾರ್‌ನ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಗಿತ್ತು. ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅದು ಸಂಪೂರ್ಣ ಹೊತ್ತಿ ಉರಿದಿತ್ತು. ಪಂತ್ ಕಾರಿನ ಗಾಜನ್ನು ಒಡೆದುಕೊಂಡು ಗ್ರೇಟ್ ಎಸ್ಕೇಪ್ ಆಗಿದ್ದರು. ಕೂಡಲೇ ಪಂತ್‍ರನ್ನು ಸ್ಥಳೀಯರು ಆಸ್ಪತ್ರೆ ದಾಖಲಿಸಿದ್ದರು.

ಇಷ್ಟು ದಿನ ಅವರು ಡೆಹ್ರಾಡೂನ್‍ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡ್ಕೋತಿದ್ದರು. ಇಂದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ಏರ್‌ಲಿಫ್ಟ್‌ ಮಾಡಲಾಗಿದೆ. ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಪಂತ್‌ಗೆ ಚಿಕಿತ್ಸೆ ಕೊಡಲಾಗುತ್ತಿದೆ.

Share Post