DistrictsHealth

SDM ಕೋವಿಡ್‌ ಪ್ರಕರಣ 281ಕ್ಕೆ ಏರಿಕೆ

ಧಾರವಾಡ : ಸತ್ತೂರಿನಲ್ಲಿರುವ ಎಸ್‌ಡಿಎಂ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಮತ್ತೆ 77 ಜನರಲ್ಲಿ ಕೋವಿಡ್-‌೧೯ ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 281ಕ್ಕೆ ಏರಿಕೆಯಾಗಿದೆ.

ಶುಕ್ರವಾರದವರೆಗೆ ಸೋಂಕಿತರ ಸಂಖ್ಯೆ 204 ಇತ್ತು. ಸೋಂಕಿತರನ್ನು ಪ್ರತ್ಯೇಕವಾಗಿ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾಡಳಿತದ ಆದೇಶದಂತೆ ಆಸ್ಪತ್ರೆಯ ಹೊರರೋಗಿಗಳ ವಿಭಾಗವನ್ನು ಮುಚ್ಚಲಾಗಿದೆ.

Share Post