HealthNational

ಸೋನಿಯಾಗಾಂಧಿಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ನವದೆಹಲಿ; ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ದೆಹಲಿಯ ಗಂಗಾರಾಮ್‌ ಆಸ್ಪತ್ರೆಯಲ್ಲಿ ಸೋನಿಯಾಗಾಂಧಿಗೆ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸಾಮಾನ್ಯ ತಪಾಸಣೆಗಾಗಿ ಸೋನಿಯಾಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಸೋನಿಯಾಗಾಂಧಿಯವರು ಅನಾರೋಗ್ಯದ ನೆಪವೊಡ್ಡಿ ರಾಜಕೀಯದಿಂದ ನಿವೃತ್ತಿಯಾಗುವುದರ ಬಗ್ಗೆ ಮಾತನಾಡಿದ್ದರು.

Share Post