Health

ಇಂದು ಮಧ್ಯಾಹ್ನ ವೀಕೆಂಡ್‌ ಕರ್ಫ್ಯೂ ಭವಿಷ್ಯ ನಿರ್ಧಾರ

ಬೆಂಗಳೂರು: ನಾಳೆ ವೀಕೆಂಡ್‌ ಕರ್ಫ್ಯೂ ಇರುತ್ತೋ, ಇಲ್ಲವೋ ಎಂಬುದರ ಬಗ್ಗೆ ಮಧ್ಯಾಹ್ನ 2 ಗಂಟೆ ವೇಳೆಗೆ ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರು, ಅಧಿಕಾರಿಗಳು ಹಾಗು ಸಚಿವರ ಸಭೆ ನಡೆಯಲಿದೆ. ಸಭೆಯಲ್ಲಿ ವೀಕೆಂಡ್‌ ಕರ್ಫ್ಯೂ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ.

ಸಭೆಗೂ ಮುನ್ನ ಮಾತನಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು, ಜನವರಿ ಅಂತ್ಯ ಹಾಗೂ ಫೆಬ್ರವರಿ ಮೊದಲ ವಾರದಲ್ಲಿ ಕೊರೊನಾ ಅತಿಹೆಚ್ಚು ಹರಡುತ್ತದೆ. ಹೀಗಾಗಿ, ಕೊರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕಿದೆ. ಆದ್ರೆ ಜೀವ-ಜೀವನ ಕಾಪಾಡಿಕೊಳ್ಳುವಂತಹ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ವೀಕೆಂಡ್‌ ಕರ್ಫ್ಯೂ ಬೇಡ ಎಂದು ಬಹುತೇಕರು ಆಗ್ರಹಿಸುತ್ತಿದ್ದಾರೆ. ಆಡಳಿತಾರೂಢ ಬಿಜೆಪಿ ನಾಯಕರೇ ವೀಕೆಂಡ್‌ ಕರ್ಫ್ಯೂ ಬೇಡ ಎಂದು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಭೆಯ ಬಳಿಕ ವೀಕೆಂಡ್‌ ಕರ್ಫ್ಯೂಗೆ ಬ್ರೇಕ್‌ ಹಾಕುವ ಸಾಧ್ಯತೆಯೇ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.

Share Post