ಡೆಂಘಿಗೆ ಕಡೂರಿನ ಮುದ್ದಾದ ಬಾಲಕಿ ಬಲಿ?
ಚಿಕ್ಕಮಗಳೂರು; ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 6 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಡೆಂಘಿ ಇಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಬಾಲಕಿ ಸಾನಿಯಾ ಮೃತಪಟ್ಟ ಬಾಲಕಿ.. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಸಾನಿಯಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.. ಡೆಂಘಿ ಇಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಇದೇ ವೇಳೆ ಬಾಲಕಿಯ ತಂದೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನಗೆ ಪರಿಹಾರ ಬೇಡ. ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಮಾಡಿ ಎಂದು ಹೇಳಿದ್ದಾರೆ. ಡೆಂಘಿ ಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಇದರಿಂದಲೇ ನನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು ಗೋಳು ತೋಡಿಕೊಂಡಿದ್ದಾರೆ.