International

ಶ್ರೀಲಂಕಾ ಜೋರಾಯ್ತು ಪ್ರತಿಭಟನೆ; ಪ್ರಧಾನಿ ರಾನಿಲ್‌ ನಿವಾಸಕ್ಕೆ ಬೆಂಕಿ

ಕೊಲಂಬೊ; ಸಂಜೆಯಷ್ಟೇ ಶ್ರೀಲಂಕಾ ಅಧ್ಯಕ್ಷರ ನಿವಾಸಕ್ಕೆ ನುಗ್ಗಿದ್ದ ಪ್ರತಿಭಟನಾಕಾರರು, ರಾತ್ರಿ ಪ್ರಧಾನಿ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಲ್ಲಿನ ಜನರ ಪ್ರತಿಭಟನೆ ತೀವ್ರಗೊಂಡಿದೆ. ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರ ಮನೆಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಿದ್ದಾರೆ.

ಇಂದು ಮಧ್ಯಾಹ್ನ ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. ಸಾವಿರಾರು ಪ್ರತಿಭಟನಾಕಾರರು ರಾಜಪಕ್ಸೆಯವರ ನಿವಾಸಕ್ಕೆ ಮುತ್ತಿಗೆ ಹಾಕಿ ಸ್ವಿಮ್ಮಿಂಗ್ ಪೂಲ್‍ನಲ್ಲಿ ಈಜಿದ್ದರು. ಇದೀಗ ಪ್ರತಿಭಟನಾಕಾರರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ಈ ಬಗ್ಗೆ ಪ್ರಧಾನಿ ಕಚೇರಿ ಮಾಹಿತಿ ನೀಡಿದೆ. ಈಗಾಗಲೇ ರನಿಲ್ ವಿಕ್ರಮಸಿಂಘೆ ಅವರು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಅವರು ಟ್ವೀಟ್‌ ಕೂಡಾ ಮಾಡಿದ್ದಾರೆ.

Share Post