ಉಗ್ರರ ದಾಳಿ ; ಪಾಕಿಸ್ತಾನ ಸೇನೆಯ 10 ಸೈನಿಕರ ಸಾವು
ಇಸ್ಲಾಮಾಬಾದ್ : ಪಾಕಿಸ್ತಾನದ ಪ್ರಕ್ಷುಬ್ದ ನೈಋತ್ಯ ಬಲೂಚಿಸ್ತಾನ ಪ್ರಾಂತ್ಯದ ಕೆಚ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಇದರಿಂದ ಪಾಕಿಸ್ತಾನ ಸೇನೆಯ 10 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.
ಜನವರಿ 25-26ರ ರಾತ್ರಿ ಉಗ್ರರು ದಾಳಿ ನಡೆಸಿದ್ದಾರೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ. ಗುಂಡಿನ ಚಕಮಕಿಯಲ್ಲಿ 10 ಮಂದಿ ಸೈನಿಕರು ಮೃತಪಟ್ಟಿದ್ದಾರೆ. ಒಬ್ಬ ಉಗ್ರನನ್ನು ಹತ್ಯೆ ಮಾಡಿರರುವುದಾಗಿ ಪಾಕಿಸ್ತಾನ ತಿಳಿಸಿದೆ. ಇನ್ನು ಮೂವರು ಉಗ್ರರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಈವರೆಗೆ ಈ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬ ಮಾಹಿತಿ ಇನ್ನು ಹೊರ ಬಿದ್ದಿಲ್ಲ. ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಅನ್ನು ಗುರಿಯಾಗಿಸಿಕೊಂಡು ಬಲೂಚಿಸ್ತಾನದ ಬಂಡಾಯ ಗುಂಪುಗಳು ಹಲವು ಬಾರಿ ದಾಳಿ ನಡೆಸಿದ್ದವು ಎಂದು ಹೇಳಲಾಗಿದೆ