International

ಇಂಡೋನೇಷ್ಯಾದಲ್ಲಿ ಭಾರಿ ಭೂಕಂಪ; ಏಳು ಮಂದಿ ದುರ್ಮರಣ, 1000 ಕಟ್ಟಡ ನೆಲಸಮ

ಜಕಾರ್ತ: ಜಕಾರ್ತಾದಲ್ಲಿ ಪ್ರಬಲ ಭೂಕಂಪನವಾಗಿದ್ದು, ಸಾವಿರಕ್ಕೂ ಹೆಚ್ಚು ಕಟ್ಟಡಗಳು ಧ್ವಂಸವಾಗಿವೆ. ಕಟ್ಟಡಗಳಡಿ ಸಿಲುಕಿ ಏಳಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ಸುಮಾತ್ರಾ ಪ್ರಾಂತ್ಯದಲ್ಲಿ ಭೂಮಿ ನಡುಗಿದೆ. ರಿಕ್ಟರ್‌ ಮಾಪಕದಲ್ಲಿ ಸುಮಾರು 6.2ರಷ್ಟು ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ. 

         ಸುಮಾರು ಐದು ಸಾವಿರಕ್ಕೂ ಹೆಚ್ಚು ಮಂದಿಯನ್ನು ಈಗ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಅವರಿಗಾಗಿ ಸುಮಾರು 35 ನಿರಾಶ್ರಿತ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಇಂಡೋನೇಷ್ಯಾದ ರಾಷ್ಟ್ರೀಯ ವಿಪತ್ತು ನಿರ್ವಹಣೆ ಸಂಸ್ಥೆಯ ಹಂಗಾಮಿ ವಕ್ತಾರ ಅಬ್ದುಲ್ ಮುಹಾರಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಬರಾತ್ ಜಿಲ್ಲೆಯಲ್ಲಿ ಮೂವರು ಮತ್ತು ಪಸಮಾನ್ ಜಿಲ್ಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು 85 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸೇರಿಸಲಾಗಿದೆ.

    ಕುಸಿದುಬಿದ್ದ ಕಟ್ಟಡಗಳ ಅವಶೇಷಗಳಡಿ ಹಲವರು ಸಿಲುಕಿದ್ದಾರೆ. ಅವರಿಗಾಗಿ ಹುಡುಕಾಟ ನಡೆಯುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ನೇತೃತ್ವದಲ್ಲಿ ಹುಡುಕಾಟ ನಡೆಸಲಾಗುತ್ತಿದೆ.
Share Post