International

ಅಫ್ಘಾನಿಸ್ತಾನದಲ್ಲಿ ಭಾರಿ ಭೂಕಂಪನ; 250ಕ್ಕೂ ಹೆಚ್ಚು ಮಂದಿ ಸಾವು..!

ಕಾಬೂಲ್‌; ಅಫ್ಘಾನಿಸ್ತಾನದಲ್ಲಿ ಭಾರಿ ಭೂಕಂಪ ಸಂಭವಿಸಿದೆ. ಘಟನೆಯಲ್ಲಿ ಸುಮಾರು ೨೫೦ ಜನರು ಸಾವನ್ನಪ್ಪಿದ್ದಾರೆ. ಪಕ್ತಿಕಾ ಪ್ರಾಂತ್ಯದಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಸಾವಿನ ಸಂಖ್ಯೆ ೨೦೫ ದಾಟಬಹುದು ಮತ್ತು ೧೫೦ ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ಬಿಬಿಸಿಗೆ ತಿಳಿಸಿದರು.

ಅಫ್ಘಾನಿಸ್ತಾನದ ಆಗ್ನೇಯ ಭಾಗದ ಖೋಸ್ಟ್ನಿಂದ 44 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ. ಯುರೋಪಿಯನ್ ಮೆಡಿಟರೇನಿಯನ್ ಭೂಕಂಪಶಾಸ್ತ್ರೀಯ ಕೇಂದ್ರದ ಪ್ರಕಾರ, ಪಾಕಿಸ್ತಾನ, ಭಾರತ ಮತ್ತು ಅಫ್ಘಾನಿಸ್ತಾನದಲ್ಲಿ 500 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಂಪನದ ಅನುಭವವಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮತ್ತು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲೂ ಕಂಪನದ ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Share Post