International

ಮೆಕ್ಸಿಕೋದಲ್ಲಿ ಭೀಕರ ಅಪಘಾತ ; 12 ಮಂದಿ ದುರ್ಮರಣ

ಮೆಕ್ಸಿಕೋ: ಇಲ್ಲಿನ ಜಲಿಸ್ಕೋ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹನ್ನೆರಡು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

      ವ್ಯಾನ್‌ ಒಂದು ನಿಯಂತ್ರಣ ತಪ್ಪಿದ್ದರಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ವ್ಯಾನ್‌ನಲ್ಲಿದ್ದ ಎಂಟು ಪುರುಷರು ಹಾಗೂ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ತೀವ್ರವಾಗಿ ಗಾಯಗೊಂಡಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

 

Share Post