International

ಕರಾಚಿ ಯೂನಿವರ್ಸಿಟಿಯಲ್ಲಿ ವ್ಯಾನ್‌ ಸ್ಫೋಟ; ನಾಲ್ವರು ಸ್ಥಳದಲ್ಲೇ ದುರ್ಮರಣ

ಕರಾಚಿ: ಕರಾಚಿ ಯೂನಿವರ್ಸಿಟಿ ಆವರಣದಲ್ಲಿ ವ್ಯಾನ್‌ ನಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಜೀನದಹನವಾಗಿದ್ದಾರೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚೀನಾದ ಇಂಟರ್‌ನ್ಯಾಷನಲ್‌ ಎಜುಕೇಷನ್‌ ಫೌಂಡೇಷನ್‌ ಹಣಕಾಸು ಸಹಕಾರ ಮತ್ತು ಕೋರ್ಸ್‌ ವ್ಯವಸ್ಥೆ ರೂಪಿಸಿರುವ ಕರಾಚಿ ಯೂನಿವರ್ಸಿಟಿಯ ಕಂಫ್ಯೂಸಿಯಸ್‌ ಇನ್‌ಸ್ಟಿಟ್ಯೂಟ್‌ದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

ಸ್ಫೋಟಗೊಂಡ ವ್ಯಾನ್‌ನಲ್ಲಿ ಸುಮಾರು ಎಂಟು ಮಂದಿ ಪ್ರಯಾಣಿಸುತ್ತಿದ್ದರೆಂದು ಪೊಲೀಸರು ಹೇಳಿದ್ದಾರೆ. ಮೃತ ನಾಲ್ವರಲ್ಲಿ ಮೂವರು ಚೀನಾ ದೇಶದಕ್ಕೆ ಸೇರಿದವರು ಎಂದು ಹೇಳಲಾಗುತ್ತಿದೆ. ಸಾವಿಗೀಡಾದವರ ಸಂಖ್ಯೆ ಇನ್ನೂ ಖಚಿತವಾಗಿಲ್ಲ. ಭದ್ರತಾ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿವೆ. ಗ್ಯಾಸ್‌ ಸಿಲಿಂಡರ್‌ನಿಂದ ಸ್ಫೋಟ ಸಂಭವಿಸಿರುವುದಾಗಿ ಹೇಳಲಾಗುತ್ತಿದೆ. ಆದ್ರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

Share Post