InternationalSports

ಕಾಮನ್ವೆಲ್ತ್‌ನಲ್ಲಿ ಮೊದಲ ಚಿನ್ನ ಗೆದ್ದ ಪಿ.ವಿ.ಸಿಂಧು

ಬರ್ಮಿಂಗ್​ಹ್ಯಾಮ್​; ಕಾಮನ್ವೆಲ್ತ್​​ ಗೇಮ್ಸ್​​ನ ಮಹಿಳೆಯರ ಸಿಂಗಲ್ಸ್​‌ ಬ್ಯಾಡ್ಮಿಂಟನ್ ಫೈನಲ್​​​ನಲ್ಲಿ ಪಿ.ವಿ.ಸಿಂಧು ಚೊಚ್ಚಲ ಚಿನ್ನದ ಪದಕ‌ ಗೆದ್ದಿದ್ದಾರೆ. ಫೈನಲ್ ಪಂದ್ಯದಲ್ಲಿ ಕೆನಡಾ ಸ್ಪರ್ಧಾಳು ವಿರುದ್ಧ 21-15 21-13 ಅಂತರದಿಂದ ಸಿಂಧು ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಪಾಯಿಂಟ್​ ಪಟ್ಟಿಯಲ್ಲಿ ಭಾರತ 4ನೇ ಸ್ಥಾನಕ್ಕೆ ಜಿಗಿದಿದೆ.

ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಸೆಮಿಫೈನಲ್‌ನಲ್ಲಿ ಸಿಂಗಾಪುರದ ಜಿಯಾ ಮಿನ್ ವಿರುದ್ಧ ಗೆಲುವು ಸಾಧಿಸಿ ಫೈನಲ್​ಗೆ ಲಗ್ಗೆ ಇಟ್ಟಿದ್ದರು. ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸಿಂಧು ಈ ಹಿಂದೆ 2014ರಲ್ಲಿ ಕಾಮನ್‌ವೆಲ್ತ್‌ನಲ್ಲಿ ಕಂಚು ಹಾಗೂ 2018ರಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಕಾಮನ್​​ವೆಲ್ತ್ ಗೇಮ್ಸ್​​ನಲ್ಲಿ ಭಾರತ ಇಲ್ಲಿಯವರೆಗೆ 19 ಚಿನ್ನ, 15 ಬೆಳ್ಳಿ, 22 ಕಂಚಿನೊಂದಿಗೆ ಒಟ್ಟು 56 ಪದಕ ಸಂಪಾದಿಸಿದೆ. ಈ ಮೂಲಕ ಪದಕಗಳ ಸಾಲಿನಲ್ಲಿ 4ನೇ ಸ್ಥಾನದಲ್ಲಿದೆ.

 

Share Post