International

ಅಬುಧಾಬಿ ವಿಮಾನ ನಿಲ್ದಾಣದಲ್ಲಿ ಡ್ರೋನ್‌ ದಾಳಿ – ಮೂರು ಸಾವು

ದುಬೈ : ಅಬುಧಾಬಿ ವಿಮಾನ ನಿಲ್ದಾಣದಲ್ಲಿರುವ ಸೌದಿ ಬಳಿ ಡ್ರೋನ್‌ ದಾಳಿ ನಡೆದಿದ್ದು ಮೂವರು ಸಾವನ್ನಪ್ಪಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸತ್ತ ಮೂವರಲ್ಲಿ ಇಬ್ಬರು ಭಾರತೀಯರು ಮತ್ತು ಒಬ್ಬರು ಪಾಕಿಸ್ತಾನದವರು ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ತೈಲ ಸಂಸ್ಥೆಯ ಶೇಖರಣಾ ಸೌಲಭ್ಯಗಳ ಸಮೀಪವಿರುವ ಕೈಗಾರಿಕಾ ಮುಸಾಫಾ ಪ್ರದೇಶದಲ್ಲಿ ಮೂರು ಇಂಧನ ಟ್ಯಾಂಕರ್‌ಗಳು ಸ್ಪೋಟಗೊಂಡಿವೆ ಹಾಗೂ ವಿಮಾನ ನಿಲ್ದಾಣದ ನಿರ್ಮಾಣ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಪ್ರಾಥಮಿಕ ತನಿಖೆಗಳ ಪ್ರಕಾರ ಸ್ಪೋಟ ಹಾಗೂ ಬೆಂಕಿ ಕಾಣಿಸಿಕೊಂಡ ಎರಡೂ ಸ್ಥಳಗಳಲ್ಲಿ ಡ್ರೋನ್‌ ಭಾಗಗಳು ಕಂಡುಬಂದಿವೆ.

Share Post