ಅಫ್ಘಾನಿಸ್ತಾನದಲ್ಲಿ ಭೂಕಂಪನ : 26 ಮಂದಿ ಸಾವು
ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಭೂಕಂಪನದಿಂದ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಭೂ ಕಂಪನ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 5.3ರಷ್ಟು ದಾಖಲಾಗಿದೆ. ಭೂಕಂಪನದಿಂದ ಮೂಖರ್ ಜಿಲ್ಲೆಯ ನಿವಾಸಿಗಳಿಗೆ ತೊಂದರೆಗಳಾಗಿದೆ
ಮೃತ 26 ಜನರಲ್ಲಿ ಐವರು ಮಹಿಳೆಯರು ಮತ್ತು ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ. ಅಫ್ಘಾನಿಸ್ತಾನದಲ್ಲಿ ಆಗಾಗ್ಗೆ ಭುಕಂಪನ ಸಂಭವಿಸುತ್ತಲೇ ಇರುತ್ತದೆ. ಯುರೇಷಿಯನ್ ಮತ್ತು ಭಾರತೀಯ ಟೆಕ್ಟೋನಿಕ್ ಪ್ಲೇಟ್ಗಳ ಜಂಕ್ಷನ್ನ ಸಮೀಪದಲ್ಲಿ ಇರುವ ಹಿಂದೂ ಕುಶ್ ಪರ್ವತ ಶ್ರೇಣಿಯಲ್ಲಿ ಹೆಚ್ಚಾಗಿ ಭೂಮಿ ಕಂಪಿಸುವುದು ದಾಖಲಾಗಿದೆ.
ಸಂಜೆ 4.10ರ ಸುಮಾರಿಗೆ ಈ ಭೂಕಂಪನ ಸಂಭವಿಸಿದೆ. ಅನೇಕ ಮನೆಗಳಿಗೆ ಇದರಿಂದ ಹಾನಿಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರುವ ಸಾಧ್ಯತೆ ಇದೆ ಎನ್ನಲಾಗ್ತಿದೆ.