International

ಭೀಕರ ರಸ್ತೆ ಅಪಘಾತ 16 ಮಂದಿ ದುರ್ಮರಣ

ಕೈರೋ: ಭೀಕರ ರಸ್ತೆ ಅಪಘಾತವಾಗಿ ೧೬ ಮಂದಿ ಸಾವನ್ನಪ್ಪಿದ ದಾರುಣ ಘಟನೆ ಈಜಿಪ್ಟ್‌ನ ಸೈನೈ ಪರ್ಯಾಯ ದ್ವೀಪದಲ್ಲಿ ನಡೆದಿದೆ. ಶನಿವಾರ ಸಂಜೆ ಈ ದುರ್ಘಟನೆ ನಡೆದಿದ್ದು, ೧೮ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿಯಿದೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಕೆಲವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.  ಸಾರ್ವಜನಿಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್‌ಗೆ ಮಿನಿ ಬಸ್‌ವೊಂದು ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share Post