International

ಗುರುದ್ವಾರದಲ್ಲಿ ಸ್ಫೋಟ; ಒಬ್ಬ ಸಾವು, ನಾಲ್ವರು ನಾಪತ್ತೆ

ಕಾಬೂಲ್‌; ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸರಣಿ ಬಾಂಬ್‌ ಸ್ಫೋಟ ಸಂಭವಿಸಿದೆ. ಇಲ್ಲಿ ಸಿಖ್ಖರ ಪ್ರಾರ್ಥನಾ ಮಂದಿರ ಗುರುದ್ವಾರದಲ್ಲಿ ಸ್ಫೋಟ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ ಈ ಕೃತ್ಯ ಎಸಗಲಾಗಿದೆ. ಪ್ರಾರ್ಥನಾ ಮಂದಿರಲ್ಲಿ ಮುವತ್ತು ಮಂದಿ ಇದ್ದರು ಎಂದು ತಿಳಿದುಬಂದಿದೆ. ಕಟ್ಟಡದ ಎರಡನೇ ಮಹಡಿಯಲ್ಲಿ ಹಲವರು ಸಿಲುಕಿದ್ದು, ಅವರನ್ನು ರಕ್ಷಿಸುವ ಪ್ರಯತ್ನ ನಡೆಸಲಾಗುತ್ತಿದೆ. ಮೊದಲಿಗೆ ಬಂದೂಕುದಾರಿಗಳು ಸೆಕ್ಯೂರಿಟಿ ಗಾರ್ಡ್‌ನನ್ನು ಗುಂಡಿಕ್ಕಿ ಕೊಂದಿದ್ದಾರೆ. ಅನಂತರ ಬಾಂಬ್‌ ಬ್ಲಾಸ್ಟ್‌ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Share Post