International

ಆತ್ಮಹತ್ಯೆಗೆ ಶರಣಾದ ಮಾಜಿ ಮಿಸ್‌ ಅಮೆರಿಕಾ

ನ್ಯೂಯಾರ್ಕ್‌ : ಮಾಜಿ ಮಿಸ್‌ ಅಮೆರಿಕ ಚೆಸ್ಲಿ ಕ್ರಿಸ್ಟ್‌ (30) ಅವರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಹೊಂದಿದ್ದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2019ರಲ್ಲಿ ಈ ಮಾಡೆಲ್‌ ಮಿಸ್‌ ಯುಎಸ್‌ಎ ವಿರುದು ಪಡೆದುಕೊಂಡಿದ್ದರು

ನ್ಯೂಯಾರ್ಕ್‌ನ ಮ್ಯಾನ್‌ಹ್ಯಾಟನ್‌ ಪ್ರದೇಶದ ಕಟ್ಟಡವೊಂದರಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಸಾಕಷ್ಟು ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು, ಚೆಸ್ಲಿ ಸಾವು ನಮಗೆ ತೀವ್ರ ಆಘಾತವನ್ನು ಉಂಟುಮಾಡಿದೆ ಎಂದು ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ.

ಚೆಸ್ಲಿ ಅವರು ಅಮೆರಿಕದ ಮನರಂಜನಾ ಚಾನೆಲ್‌ ಎಕ್ಸ್ಟ್ರಾ ಟಿವಿಯಲ್ಲಿ ನಿರೂಪಕಿಯಾಗಿ ಸಾಕಷ್ಟು ಖ್ಯಾತಿಗಳಿಸಿದ್ದರು. ಇನ್ನು ಆತ್ಮಹತ್ಯೆಗೂ ಮುನ್ನ ತಮ್ಮ ಇನ್ಸ್ಟಾಗ್ರಾಂನಲ್ಲಿ , ಈ ದಿನ ನಿಮ್ಮ ಬಾಳಿನಲ್ಲಿ ಶಾಂತಿ ನೆಮ್ಮದಿಯನ್ನು ತರಬಹುದು ಎಂದು ಪೋಸ್ಟ್‌ ಹಾಕಿಕೊಂಡಿದ್ದರು.

 

Share Post