International

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಪಾಕ್‌ ಪ್ರಧಾನಿಗೆ ನಿದ್ರೆ ಇಲ್ಲವಂತೆ

ಪಾಕಿಸ್ತಾನ:  ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರಾತ್ರಿಯಲ್ಲಿ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಆದರೆ, ಇದು ಕೇವಲ ಪಾಕಿಸ್ತಾನದ ವಿಚಾರವಲ್ಲ ಎಂದು ಹೇಳಿರುವ ಇಮ್ರಾನ್ ಖಾನ್, ಜಗತ್ತಿನ ಹಲವು ರಾಷ್ಟ್ರಗಳು ಈ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳುತ್ತಿವೆ ಎಂದಿದ್ದಾರೆ.

ಹಣದುಬ್ಬರಕ್ಕೆ ಎರಡು ಹಂತಗಳಿವೆ  ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಚಾಲ್ತಿ ಖಾತೆಯಲ್ಲಿ ಕೊರತೆ ಇತ್ತು. ಇದರಿಂದ ಆಮದು ಬೆಲೆ ಗಗನಕ್ಕೇರಿದೆ. ಪ್ರಸ್ತುತ ಹಣದುಬ್ಬರದ ಮೇಲೆ ಕರೋನವೈರಸ್ ಸಾಂಕ್ರಾಮಿಕ ಕಾಯಿಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಪರಿಣಾಮ ಬೀರಿದೆ ಎಂದು ವಿವರಿಸಿದ್ದಾರೆ.

ಆದರೆ, ಇಂತಹ ವಿಷಮ ಪರಿಸ್ಥಿತಿಯಲ್ಲಿ ಪಾಕಿಸ್ತಾನ.. ಭಾರತದ ಆರ್ಥಿಕತೆಗಿಂತ ಉತ್ತಮವಾಗಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. “ಕೊರೋನಾ ವೈರಸ್‌  ಭಾರತಕ್ಕಿಂತ ನಮ್ಮ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ. ಆದರೂ ನಮ್ಮ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ಕುಟುಕಿದ್ದಾರೆ.

ಮತ್ತೊಂದೆಡೆ ಪಾಕಿಸ್ತಾನ, ಮಾಜಿ ಪ್ರಧಾನಿ ನವಾಜ್ ಷರೀಫ್ ಆಗಮನವನ್ನು ಎದುರು ನೋಡುತ್ತಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.  ಇಂದು ಅಥವಾ ನಾಳೆ  ಲಂಡನ್‌ನಿಂದ ಪಾಕಿಸ್ತಾನಕ್ಕೆ ಬರಬಹುದ ಅಥವಾ ಬರದೆಯೂ ಇರಬಹುದು ಎಂಬ ದ್ವಂದ್ವ ಹೇಳಿಕೆ ನೀಡಿದ್ದಾರೆ. ಯಾಕಂದ್ರೆ ನವಾಜ್ ಷರೀಫ್ ಅವರು ಹಣವನ್ನು ಪ್ರೀತಿಸುತ್ತಾರೆ ಹಾಗಾಗಿ ಅವರು ಮತ್ತೆ ಪಾಕಿಸ್ತಾನಕ್ಕೆ ಬಂದು ಅದನ್ನು  ಕಳೆದುಕೊಳ್ಳಲು ಬಯಸುವುದಿಲ್ಲ ಎಂದು ಟಾಂಗ್‌ ನೀಡಿದ್ದಾರೆ..

Share Post