International

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ; ಇದುವರೆಗೆ 1600 ಮಂದಿ ದುರ್ಮರಣ

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದಲ್ಲಿ ಸಾರ್ವಜನಿಕರು ಪ್ರಾಣ ತೆರುತ್ತಿದ್ದಾರೆ. ಇದುವರೆಗೆ ಸುಮಾರು 1600ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದಾರೆ. 143 ಮಕ್ಕಳು ಮತ್ತು 105 ಮಹಿಳೆಯರು ಕೂಡಾ ಮೃತರಲ್ಲಿ ಸೇರಿದ್ದಾರೆ. ಇಸ್ರೇಲ್‌ನಲ್ಲಿ ಕನಿಷ್ಠ 900 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಯಾವುದೇ ಎಚ್ಚರಿಕೆ ಕೊಡದೇ ಗಾಜಾ ಪಟ್ಟಿಯಲ್ಲಿ ನಾಗರಿಕರ ಮೇಲೆ ದಾಳಿ ನಡೆದರೆ ಒತ್ತೆಯಾಳಾಗಿರಿಸಿರುವ ಇಸ್ರೇಲಿಗರನ್ನು ಒಬ್ಬೊಬ್ಬರನ್ನಾಗಿಯೇ ಕೊಲ್ಲುತ್ತೇವೆ ಎಂದು ಹಮಾಸ್ ಉಗ್ರರು ಬೆದರಿಕೆ ಹಾಕಿದ್ದಾರೆ. ಇನ್ನು ಇಸ್ರೇಲ್‌ನಲ್ಲಿ ಭಾರತೀಯರು ಕೂಡಾ ಸಿಲುಕಿದ್ದು ಸಂಕಷ್ಟ ಅನುಭವಿಸುತ್ತಿದ್ದಾರೆ. ಕೆಲವರು ಬಂಕರ್‌ಗಳಲ್ಲಿ ಆಶ್ರಯ ಪಡೆದಿದ್ದು ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬಂದಿದೆ.

 

Share Post