International

ಮಾಲ್ಡೀವ್ಸ್‌ನಲ್ಲಿ ಯೋಗಾ ಮಾಡುತ್ತಿದ್ದವರ ಮೇಲೆ ದಾಳಿ

ಮಾಲೆ; ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಮಾಲ್ಡೀವ್ಸ್‌ನ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ಮೇಲೆ ಗುಂಪೊಂದು ದಾಳಿ ಮಾಡಿದೆ. ಅಲ್ಲಿ ಯೋಗಾ ಮಾಡುತ್ತಿದ್ದವರಿಗೆ ಅಡ್ಡಿಪಡಿಸಿ ಗದ್ದಲ ಮಾಡಿದೆ.

ಮಾಲ್ಡೀವ್ಸ್‌ನ ಯುವಜನ, ಕ್ರೀಡೆ ಮತ್ತು ಸಮುದಾಯ ಸಬಲೀಕರಣ ಸಚಿವಾಲಯ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಲ್ಲಿಗೆ ಬಂದ ಗುಂಪೊಂದು ಏಕಾಏಕಿ ದಾಳಿ ಮಾಡಿ ಯೋಗಾ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದೆ. ಆ ಗುಂಪು ಯೋಗಾಭ್ಯಾಸದಲ್ಲಿ ಪಾಲ್ಗೊಂಡವರು ಕೂಡಲೇ ಕ್ರೀಡಾಂಗಣವನ್ನು ತೆರವು ಮಾಡಬೇಕೆಂದು ಎಚ್ಚರಿಸಿದೆ. ಇದರಿಂದಾಗಿ ಕಾರ್ಯಕ್ರಮವನ್ನು ಅರ್ಧಕ್ಕೇ ಮೊಟಕುಗೊಳಿಸಲಾಗಿದೆ.

 

Share Post