ಮಕ್ಕಳ ಆರೈಕೆ ಕೇಂದ್ರದಲ್ಲಿ ಗುಂಡಿನ ದಾಳಿ; 30ಕ್ಕೂ ಹೆಚ್ಚು ಮಂದಿ ಹತ್ಯೆ
ಬ್ಯಾಂಕಾಕ್; ಥಾಯ್ಲೆಂಡ್‌ನ ಮಕ್ಕಳ ಆರೈಕೆ ಕೇಂದ್ರದಲ್ಲಿ ಗುಂಡಿನ ದಾಳಿ ನಡೆದಿದ್ದು, 30 ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಲಾಗಿದೆ. ಅದರಲ್ಲಿ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 23 ಮಕ್ಕಳು, ಇಬ್ಬರು ಶಿಕ್ಷಕರು ಮತ್ತು ಒಬ್ಬ ಪೊಲೀಸ್ ಮೃತಪಟ್ಟಿರುವುದು ಈವರೆಗೆ ದೃಢಪಟ್ಟಿದೆ
ನೊಂಗ್ಬುವಾ ಲಂಫೂ ಪಟ್ಟಣದಲ್ಲಿ ಈ ಕೃತ್ಯ ಎಸಗಲಾಗಿದೆ. ಮಧ್ಯಾಹ್ನ ಆರೈಕೆ ಕೇಂದ್ರಕ್ಕೆ ನುಗ್ಗಿದ ಬಂದೂಕುಧಾರಿ ವ್ಯಕ್ತಿಯೊಬ್ಬ ಮನಬಂದಂತೆ ಗುಂಡು ಹಾರಿಸಿದ್ದಾನೆ ಎಂದು ಪೊಲಿಸ್ ಮೇಜರ್ ಜನರಲ್ ಅಚಯೊನ್ ಕ್ರೈಥಾಂಗ್ ತಿಳಿಸಿದ್ದಾರೆ. ದಾಳಿಯ ನಂತರ ಬಂದೂಕುಧಾರಿ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.