ವಿದೇಶಕ್ಕೆ ಪರಾರಿಯಾಗಿದ್ದ ಗೊಟಬಯ ಶ್ರೀಲಂಕಾಗೆ ವಾಪಸ್
ಕೊಲಂಬೋ; ನಾಗರಿಕ ಭಾರಿ ಪ್ರತಿಭಟನೆ ಎದುರಿಸಲಾಗದೇ ಪರಾರಿಯಾಗಿದ್ದ ಶ್ರೀಲಂಕಾ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಶ್ರೀಲಂಕಾಗೆ ವಾಪಸ್ಸಾಗಿದ್ದಾರೆ. ಲಂಕಾ ತೊರೆದಿದ್ದ ರಾಜಪಕ್ಸೆಗೆ ಸಿಂಗಾಪುರದಲ್ಲಿ 14 ದಿನಗಳ ಭೇಟಿಯ ಪಾಸ್ ನೀಡಲಾಗಿತ್ತು. ಅವರು ಮಾಲ್ಡೀವ್ಸ್‌ನಿಂದ ಸಿಂಗಾಪುರಕ್ಕೆ ಹೋಗಿ, ಬಳಿಕ ಥೈಲ್ಯಾಂಡ್‌ಗೆ ತೆರಳಿದ್ದರು. 2 ತಿಂಗಳ ಬಳಿಕ ರಾಜಪಕ್ಸೆ ಶ್ರೀಲಂಕಾಗೆ ಮರಳಿದ್ದಾರೆ.
ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಸಾರ್ವಜನಿಕರು ಜುಲೈನಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದರು. ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಜುಲೈ 9 ರಂದು ರಾಜಪಕ್ಸೆ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಶ್ರೀಲಂಕಾದಿಂದ ಪಲಾಯನಗೈದಿದ್ದ ರಾಜಪಕ್ಸೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು.