International

ಪಾಕಿಸ್ತಾನ ಪ್ರಧಾನಿ ಇಮ್ರಾಜ್‌ ಖಾನ್‌ಗೆ ಕುರ್ಚಿ ಕಳೆದುಕೊಳ್ಳುವ ಭೀತಿ

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಅವರು ಕುರ್ಚಿ ಕಳೆದುಕೊಳ್ಳುತ್ತಿರುವ ಭೀತಿ ಎದುರಾಗಿದೆ. ಅವರದೇ ಪಕ್ಷದ ಸಂಸದರು ಇಮ್ರಾನ್‌ ವಿರುದ್ಧ ತಿರುಗಿಬಿದ್ದಿದ್ದಾರೆ. ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ 24 ಸದಸ್ಯರು ಇಮ್ರಾನ್‌ ವಿರುದ್ಧ ಬಂಡೆದ್ದಿದ್ದಾರೆ. ಪ್ರತಿಪಕ್ಷಗಳು ಮಂಡಿಸಲು ಉದ್ದೇಶಿಸಿರುವ ಅವಿಶ್ವಾಸ ನಿರ್ಣಯವನ್ನು ಆಡಳಿತ ಪಕ್ಷದ ಸದಸ್ಯರೂ ಬೆಂಬಲಿಸಲು ತೀರ್ಮಾಸಿದ್ದಾರೆ. ಹೀಗಾಗಿ ಇಮ್ರಾನ್‌ ಖಾನ್‌ಗೆ ಪ್ರಧಾನಿ ಹುದ್ದೆ ಕಳೆದುಕೊಳ್ಳುವ ಭೀತಿ ಎದುರಾಗಿದೆ.

   ಪ್ರತಿಪಕ್ಷಗಳಾದ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್​-ಎನ್​) ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಇಮ್ರಾನ್‌ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ತೀರ್ಮಾನಿಸಿವೆ. ಈ ಸಂಬಂಧ ಈಗಾಗಲೇ ಪ್ರತಿಪಕ್ಷಗಳ 100 ಸದಸ್ಯರು ಮಾ.8ರಂದು ಮನವಿಯನ್ನೂ ಸಲ್ಲಿಸಿದ್ದಾರೆ. ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟು ಹಾಗೂ ಹಣದುಬ್ಬರಕ್ಕೆ ಇಮ್ರಾನ್​ ಖಾನ್​ ಕಾರಣ ಎಂದು ಪ್ರತಿಪಕ್ಷಗಳು ದೂರಿವೆ.

ಹೀಗಾಗಿ ಇಮ್ರಾನ್​ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಮಂಡಿಸಿರುವ ಅವಿಶ್ವಾಸ ನಿರ್ಣಯವು ಮಾ.28ರಂದು ಸಂಸತ್ತಿನ ಮುಂದೆ ಬರುವ ಸಾಧ್ಯತೆ ಇದೆ. ಈ ನಡುವೆ ಇಮ್ರಾನ್​ ಖಾನ್ ಪಕ್ಷದ ಸದಸ್ಯರೇ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಬೆಂಬಲಿಸಲು ತೀರ್ಮಾನಿಸಿದ್ದಾರೆ.

Share Post