ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ; ಆಡಳಿತ ಪಕ್ಷದವರೂ ಬೆಂಬಲ
ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯದ ಪ್ರಕ್ರಿಯೆ ನಾಳೆಯಿಂದ ಪಾಕಿಸ್ತಾನದ ಸಂಸತ್ತಿನಲ್ಲಿ ಆರಂಭವಾಗಲಿದೆ. ಈ ನಿರ್ಣಯ ಅಂಗೀಕಾರವಾದರೆ, ಇಮ್ರಾನ್ ಖಾನ್ ಪ್ರಧಾನಿ ಸ್ಥಾನದಿಂದ ಪದಚ್ಯುತಗೊಳ್ಳುತ್ತಾರೆ.
ಇಮ್ರಾನ್ ಖಾನ್ ತಮ್ಮ ಅಧಿಕಾರ ಉಳಿಸಿಕೊಳ್ಳಲು 172 ಸದಸ್ಯರ ಬೆಂಬಲ ಬೇಕು. ಆಡಳಿತ ಪಕ್ಷದಲ್ಲಿ ಅಷ್ಟು ಸದಸ್ಯರಿದ್ದಾರೆ. ಆದ್ರೆ ಆಡಳಿತ ಪಕ್ಷದ ಸದಸ್ಯರಲ್ಲೇ ಬಹುತೇಕರು ಇಮ್ರಾನ್ ಖಾನ್ ವಿರುದ್ಧ ಬಂಡೆದ್ದಿದ್ದಾರೆ. ಇನ್ನು ವಿರೋಧ ಪಕ್ಷಗಳ ಬಲವೂ 163ರಷ್ಟಿದೆ. ಹೀಗಾಗಿ ಬಂಡುಕೋರರು ವಿರೋಧ ಪಕ್ಷಗಳಿಗೆ ಕೈಜೋಡಿಸಿದರೆ ಇಮ್ರಾನ್ ಖಾನ್ ಅಧಿಕಾರ ಕಳೆದುಕೊಳೋದು ಪಕ್ಕಾ. ಅಂದಹಾಗೆ, 2023ರಲ್ಲಿ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಬೇಕಿದೆ. ಆದ್ರೆ ಈಗ ಇಮ್ರಾನ್ ಅಧಿಕಾರ ಕಳೆದುಕೊಂಡರೆ ಅದಕ್ಕಿಂತ ಬೇಗನೆ ಚುನಾವಣೆ ಎದುರಿಸಬೇಕಾಗುತ್ತದೆ.