ಝಲೆನ್ಸ್ಕಿ ಜೊತೆ ನೇರವಾಗಿ ಮಾತುಕತೆ ನಡೆಸಿ ಉಭಯ ರಾಷ್ಟ್ರಗಳ ಬಿಕ್ಕಟ್ಟನ್ನು ಪರಿಹರಿಸಿ-ಪ್ರಧಾನಿ
ರಷ್ಯಾ: ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಜೊತೆ ಮಾತನಾಡಿದ ಬಳಿಕ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆಗೂ ಚರ್ಚೆ ನಡೆಸಿದ್ದಾರೆ. ಸುಮಾರು 50 ನಿಮಿಷಗಳ ಕಾಲ ಪ್ರಧಾನಿ ಮೋದಿ ದೂರವಾಣಿ ಮೂಲಕ ಮಾತನಾಡಿದರು. ಉಕ್ರೇನ್ ಮತ್ತು ರಷ್ಯಾ ನಡುವಿನ ಮಾತುಕತೆಯ ಸ್ಥಿತಿಯನ್ನು ಪುಟಿನ್ ಅವರು ಪ್ರಧಾನಿ ಮೋದಿಯವರಿಗೆ ವಿವರಿಸಿದರು.
ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಪುಟಿನ್ ಜೊತೆ ರಷ್ಯಾ-ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಬಗ್ಗೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ನೇರ ಮಾತುಕತೆ ನಡೆಸಿ ವಿವಾದವನ್ನು ಅಂತ್ಯಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸುಮಿ ಸೇರಿದಂತೆ ಉಕ್ರೇನ್‌ನ ಕೆಲವು ಭಾಗಗಳಲ್ಲಿ ಕದನ ವಿರಾಮ ಘೋಷಿಸಿ ಮಾನವೀಯ ಕಾರಿಡಾರ್‌ಗಳನ್ನು ಸ್ಥಾಪಿಸಿದ್ದಕ್ಕಾಗಿ ಪ್ರಧಾನಿ ಮೋದಿ ರಷ್ಯಾಗೆ ಧನ್ಯವಾದ ಅರ್ಪಿಸಿದ್ರು. ಸುಮಿ ನಗರದಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಆದಷ್ಟು ಬೇಗ ಸ್ಥಳಾಂತರಿಸುವ ಕೆಲಸವನ್ನು ಮಾಡುವಂತೆ ಪ್ರಧಾನಿ ಮೋದಿ ಪುಟಿನ್ ಕೇಳಿದ್ರು. ಈ ನಿಟ್ಟಿನಲ್ಲಿ ಭಾರತೀಯರ ಸ್ಥಳಾಂತರಕ್ಕೆ ಎಲ್ಲ ರೀತಿಯಲ್ಲೂ ಸಹಕಾರ ನೀಡುವುದಾಗಿ ಪುಟಿನ್ ಪ್ರಧಾನಿ ಮೋದಿ ಅವರಿಗೆ ಭರವಸೆ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.