International

ಪೋಲೆಂಡ್‌ನ ಕರೋಲಿನಾ ಬಿಲಾವ್ಸ್ಕಾಗೆ ವಿಶ್ವಸುಂದರಿ ಕಿರೀಟ

ಸ್ಯಾನ್ ಜುವಾನ್: ಪೋಲೆಂಡ್‌ನ ಕರೋಲಿನಾ ಬಿಲಾವ್ಸ್ಕಾ ಅವರು 2021ರ ವಿಶ್ವ ಸುಂದರಿಯಾಗಿ ಆಯ್ಕೆಯಾಗಿದ್ದಾರೆ. ಇಂಡೋ-ಅಮೆರಿಕನ್ ಆಗಿರುವ ಶ್ರೀಸೈನಿ ಅವರು ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಪಶ್ಚಿಮ ಆಫ್ರಿಕಾದ ಒಲಿವಿಯಾ ಯೇಸ್ ಎರಡನೇ ರನ್ನರ್ ಅಪ್ ಆಗಿದ್ದಾರೆ.

ಭಾರತವನ್ನು ಪ್ರತಿನಿಧಿಸಿದ್ದ ಮಾನಸಾ ವಾರಾಣಸಿ ಸೆಮಿಫೈನಲ್‌ಗೆ ಪ್ರವೇಶಿಸಿ, ಅಲ್ಲಿಂದ ನಿರ್ಗಮಿಸಿದರು. ನಿಗದಿಯಂತೆ ಕಳೆದ ವರ್ಷದ ಡಿಸೆಂಬರ್‌ನಲ್ಲೇ ವಿಶ್ವಸುಂದರಿ ಸ್ಪರ್ಧೆ ನಡೆಯಬೇಕಿತ್ತು. ಆದ್ರೆ ಭಾರತದ ಸ್ಪರ್ಧಿ ಸೇರಿ ಹಲವರಿಗೆ ಕೊರೊನಾ ಪಾಸಿಟಿವ್‌ ಆಗಿತ್ತು. ಈ ಹಿನ್ನೆಲೆಯಲ್ಲಿ ಸ್ಪರ್ಧೆಯನ್ನು ಮುಂದೂಡಲಾಗಿತ್ತು.

Share Post