RUSSIA-UKRAINE WAR; ಉಕ್ರೇನ್ ಪಕ್ಕದ ರಾಷ್ಟ್ರಗಳಿಗೆ ಸಚಿವರನ್ನು ಕಳುಹಿಸಲು ಮೋದಿ ಚಿಂತನೆ
ನವದೆಹಲಿ: ಉಕ್ರೇನ್‌ನಲ್ಲಿ ರಷ್ಯಾ ಯುದ್ಧ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಲ್ಲಿರುವ ಭಾರತೀಯರು ಪರದಾಡುತ್ತಿದ್ದಾರೆ. ಉಕ್ರೇನ್‌ನಲ್ಲಿ ಸಿಲುಕಿರುವ ಎಲ್ಲಾ ಭಾರತೀಯರನ್ನು ಕರೆತರಲು ಭಾರತ ಸಕಲ ಪ್ರಯತ್ನ ನಡೆಸುತ್ತಿದೆ. ಇದಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿಯವರು ಇಂದು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಉಕ್ರೇನ್‌ನಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ,
ಇನ್ನು ಭಾರತೀಯ ವಿದ್ಯಾರ್ಥಿಗಳನ್ನು ರೊಮಾನಿಯಾ, ಪೋಲ್ಯಾಂಡ್ ಸೇರಿದಂತೆ ಉಕ್ರೇನ್ ಸುತ್ತಲಿನ ರಾಷ್ಟ್ರಗಳಿಗೆ ಕರೆಸಿಕೊಂಡು ಅಲ್ಲಿಂದ ಏರ್ ಲಿಫ್ಟ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಆಡಳಿತದೊಂದಿಗೆ ಮಾತುಕತೆ ನಡೆಸಿ, ಗಡಿಯಲ್ಲಿ ವಿದ್ಯಾರ್ಥಿಗಳನ್ನು ಬಿಡಿಸಲು ಕೆಲ ಸಚಿವರನ್ನೇ ಅಲ್ಲಿಗೆ ಕಳುಹಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ರೊಮಾನಿಯಾ, ಪೋಲ್ಯಾಂಡ್ ಗಳಿಗೆ ಸಚಿವರನ್ನು ಕಳುಹಿಸಿ, ವಿದ್ಯಾರ್ಥಿಗಳನ್ನು ಸೇಫಾಗಿ ಭಾರತಕ್ಕೆ ಕರೆತರುವ ಪ್ರಯತ್ನ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.