International

ರಷ್ಯಾ ಮೂಲಕವೇ ಭಾರತೀಯರ ಸ್ಥಳಾಂತರ; ಕೇಂದ್ರ ಮನವಿಗೆ ರಷ್ಯಾ ಅಸ್ತು

ನವದೆಹಲಿ: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ರಷ್ಯಾ ಮೂಲಕವೇ ಭಾರತಕ್ಕೆ ಕರೆತರುವುದಕ್ಕೆ ರಷ್ಯಾ ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಭಾರತದಲ್ಲಿರುವ ರಷ್ಯಾ ರಾಯಭಾರಿ ಡೆಇನ್ಸ್‌ ಅಲಿಪೋವ್‌ ಹೇಳಿಕೆ ನೀಡಿದ್ದಾರೆ. ಭಾರತದ ಮನವಿಯನ್ನು ನಾವು ಸ್ವೀಕರಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಖಾರ್ಕಿವ್, ಪೂರ್ವ ಉಕ್ರೇನ್‌ನ ಇತರ ಪ್ರದೇಶಗಳಲ್ಲಿ ಸಾವಿರಾರು ಭಾರತೀಯರು ಸಿಲುಕಿದ್ದಾರೆ. ಯುದ್ಧ ನಡೆಯುತ್ತಿರುವುದರಿಂದ ಅವರನ್ನು ಸ್ಥಳಾಂತರಿಸಲು ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೆರವಾಗುವಂತೆ ರಷ್ಯಾಗೆ ಭಾರತ ಮನವಿ ಮಾಡಿತ್ತು. ಇದಕ್ಕೆ ರಷ್ಯಾ ಸ್ಪಂದಿಸಿದೆ. ಭಾರತೀಯರ ರಕ್ಷಣೆ ಸಂಬಂಧ ಅಧಿಕಾರಿಗಳ ಜತೆ ಸಂಪರ್ಕ ಮಾಡಿದ್ದೇವೆ. ಭಾರತೀಯ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇವೆ. ರಷ್ಯಾ ಮಾರ್ಗವಾಗಿ ಅವರನ್ನು ಸ್ಥಳಾಂತರಿಸಲು ಮನವಿ ಮಾಡಿದ್ದಾರೆ. ಭಾರತದ ಮನವಿಯನ್ನು ನಾವು ಸ್ವೀಕರಿಸಿದ್ದೇವೆ ಎಂದು ಭಾರತದಲ್ಲಿನ ರಷ್ಯಾ ರಾಯಭಾರಿ ಡೆನಿಸ್ ಅಲಿಪೋವ್ ಹೇಳಿಕೆ ನೀಡಿದ್ದಾರೆ.

Share Post