International

ಉಕ್ರೇನ್‌ಗೆ ಶಸ್ತ್ರಾಸ್ತ್ರ ರವಾನಿಸಿದರೆ ಮೂರನೇ ಮಹಾಯುದ್ಧ; ರಷ್ಯಾ ಎಚ್ಚರಿಕೆ

ಮಾಸ್ಕೋ: ಎರಡು ತಿಂಗಳಿಗೂ ಹೆಚ್ಚು ಕಾಲದಿಂದ ಉಕ್ರೇನ್‌ನಲ್ಲಿ ರಷ್ಯಾ ಯುದ್ಧ ನಡೆಸುತ್ತಿದೆ. ಈ ನಡುವೆ ಕೆಲ ದೇಶಗಳು ಉಕ್ರೇನ್‌ಗೆ ಶಸ್ತ್ರಾಸ್ತ್ರ ಪೂರೈಸುತ್ತಿದ್ದು, ಇದಕ್ಕೆ ರಷ್ಯಾ ತೀವ್ರ ಕೆಂಡಾಮಂಡಲವಾಗಿದೆ. ಉಕ್ರೇನ್‌ಗೆ ಶಸ್ತ್ರಾಸ್ತ್ರ ಪೂರೈಕೆ ಮುಂದುವರೆಸಿದರೆ ಮೂರನೇ ಮಹಾಯುದ್ಧಕ್ಕೆ ದಾರಿ ಮಾಡಿಕೊಡುತ್ತೀರಿ ಎಂದು ರಷ್ಯಾ ಎಚ್ಚರಿಕೆ ಸಂದೇಶ ರವಾನೆ ಮಾಡಿದೆ.

ಅಮೆರಿಕ ಮತ್ತು ಮಿತ್ರರಾಷ್ಟ್ರಗಳ ಉಕ್ರೇನ್‌ಗೆ ಮತ್ತಷ್ಟು ಶಸ್ತ್ರಾಸ್ತ್ರ ಪೂರೈಕೆ ಮಾಡುವ ಕುರಿತು ಸಭೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರಷ್ಯಾ ಈ ಎಚ್ಚರಿಕೆ ಸಂದೇಶ ರವಾನೆ ಮಾಡಿದೆ. ಮಾಧ್ಯಮಗಳ ಜೊತೆ ಮಾತನಾಡಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್‌ ಲಾವ್ರೊವ್, ಮೂರನೇ ಮಹಾಯುದ್ಧ ಆರಂಭವಾಗುವ ಅಪಾಯ ಗಂಭೀರಗೊಳ್ಳುತ್ತಿದೆ ಎಂದು ಹೇಳಿದ್ದಾರೆ. ಉಕ್ರೇನ್‌ ಶಾಂತಿ ಮಾತುಕತೆಗಳನ್ನು ವಿಫಲಗೊಳಿಸುತ್ತಿದೆ. ಯುದ್ಧ ಶುರುವಾದ ದಿನದಿಂದಲೂ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಪಾಶ್ಚಾತ್ಯ ದೇಶಗಳಿಂದ ನೆರವು ಕೇಳುತ್ತಲೇ ಬಂದಿದ್ದಾರೆ. ಶಸ್ತ್ರಾಸ್ತ್ರಗಳಿದ್ದರೆ, ಉಕ್ರೇನ್‌ ಪಡೆಗಳು ಯುದ್ಧ ಗೆಲ್ಲುವುದಾಗಿ ಅವರು ಹೇಳಿದ್ದಾರೆ. ಹೀಗಾಗಿ ಮಾಸ್ಕೋದ ಎಚ್ಚರಿಕೆಯ ನಡುವೆಯೂ ಪಾಶ್ಚಾತ್ಯ ರಾಷ್ಟ್ರಗಳು ಈಗ ಉಕ್ರೇನ್‌ಗೆ ಹೆಚ್ಚಿನ ಪ್ರಮಾಣದ ಮಿಲಿಟರಿ ನೆರವು ನೀಡಲು ಮುಂದೆ ಬರುತ್ತಿವೆ.

Share Post