RUSSIA-UKRAINE WAR; ಖೆರ್ಸನ್ ವಶಪಡಿಸಿಕೊಂಡ ರಷ್ಯಾ ಸೇನೆ; ಜನಜೀವನಕ್ಕೆ ತೊಂದರೆ ಇಲ್ಲ
ಕೀವ್: ಉಕ್ರೇನ್‌ನ ಪ್ರಮುಖ ನಗರಗಳ ಮೇಲೆ ದಾಳಿ ನಡೆಸುತ್ತಿರುವ ರಷ್ಯಾ ಒಂದೊಂದೇ ಪ್ರದೇಶಗಳನ್ನು ವಶಪಡಿಸಿಕೊಳ್ಳುತ್ತಾ ಬರುತ್ತಿದೆ. ಯುದ್ಧದ ಏಳನೇ ದಿನವಾದ ಇಂದು ಉಕ್ರೇನ್‌ನ ದಕ್ಷಿಣ ಭಾಗದಲ್ಲಿರುವ ಖೆರ್ಸನ್ ನಗರವನ್ನು ತನ್ನ ವಶಕ್ಕೆ ತೆಗೆದುಕೊಂಡಿರುವುದಾಗಿ ರಷ್ಯಾ ಸೇನೆ ಹೇಳಿಕೊಂಡಿದೆ.
ಖೆರ್ಸನ್ ಪ್ರದೇಶವನ್ನು ನಾವು ಸಂಪೂರ್ಣ ನಿಯಂತ್ರಣಕ್ಕೆ ತೆಗೆದುಕೊಂಡಿದ್ದೇವೆ. ಆದರೂ ಸಾರ್ವಜನಿಕರ ಸೇವೆಗಳು, ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ವ್ಯವಹಾರಗಳಿಗೆ ತೊಂದರೆ ಕೊಟ್ಟಿಲ್ಲ. ಎಲ್ಲವೂ ಎಂದಿನಂತೆ ನಡೆಯಲು ಅವಕಾಶ ನೀಡಲಾಗಿದೆ ಎಂದು ರಷ್ಯಾ ರಕ್ಷಣಾ ಸಚಿವಾಲಯದ ವಕ್ತಾರ ಇಗೊರ್ ಕೊನಾಶೆಂಕೋವ್ ತಿಳಿಸಿದ್ದಾರೆ.