InternationalPolitics

ಮೋದಿ ಜೊತೆ ಸೆಲ್ಫಿ; Melodi ಎಂದ ಇಟಲಿ ಪ್ರಧಾನಿ

ದುಬೈ; ದುಬೈನಲ್ಲಿ ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನ ನಡೆಯಿತು. ಇದರಲ್ಲಿ ಭಾಗವಹಿಸಿದ್ದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಯವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸೆಲ್ಫಿ ಫೋಟೋ ತೆಗೆದುಕೊಂಡಿದ್ದಾರೆ. ಅನಂತರ ಅದನ್ನು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿ, #Melodi ಎಂದು ಬರೆದಿದ್ದಾರೆ.

ಮೋದಿ ಅವರು, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾಗಿ ಸುಸ್ಥಿರ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಭಾರತ ಮತ್ತು ಇಟಲಿ ನಡುವಿನ ಸಹಯೋಗದ ಪ್ರಯತ್ನಗಳನ್ನು ಎದುರು ನೋಡುತ್ತಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ. ಈ ಕಾರ್ಯಕ್ರಮದಲ್ಲಿ 2028ರಲ್ಲಿ ಭಾರತದಲ್ಲಿ ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನ ಆಯೋಜನೆಯ ಪ್ರಸ್ತಾಪವನ್ನು ಮೋದಿ ಮಾಡಿದ್ದಾರೆ.

 

Share Post