International

ವಿಚಕ್ಷಣಾ ಕಾರ್ಯಾಚರಣೆ ವೇಳೆ ಹೆಲಿಕಾಪ್ಟರ್‌ ಪತನ; 6 ಪಾಕ್‌ ಸೈನಿಕರು ಬಲಿ

ಇಸ್ಲಾಮಾಬಾದ್ : ಮಾರ್ಚ್ 29ರಂದು ವಿಚಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಸೇನಾ ಹೆಲಿಕಾಪ್ಟರ್‌ ಒಂದು ಪತನಗೊಂಡಿದ್ದು, ಎಂಟು ಶಾಂತಿಪಾಲರು ಸಾವನ್ನಪ್ಪಿದ್ದರು. ಅದರಲ್ಲಿ ಆರು ಮಂದಿ ಪಾಕ್‌ ಸೈನಿಕರು ಸೇರಿದ್ದಾರೆ ಎಂದು ತಿಳಿದುಬಂದಿದೆ. 

  ಕಾಂಗೋದಲ್ಲಿ ವಿಶ್ವಸಂಸ್ಥೆಯ ಶಾಂತಿ ಕಾರ್ಯಾಚರಣೆಯಲ್ಲಿದ್ದಾಗ ಹೆಲಿಕಾಪ್ಟರ್ ಪತನವಾಗಿತ್ತು. ಪಾಕಿಸ್ತಾನ ಸೇನೆಯ ಈ ಹೆಲಿಕಾಪ್ಟರ್​ ಅನ್ನು ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದಲ್ಲಿ (MONUSCO) ವಿಶ್ವಸಂಸ್ಥೆಯ ಸ್ಥಿರೀಕರಣ ಮಿಷನ್‌ನೊಂದಿಗೆ ಶಾಂತಿಪಾಲನಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಈ ವೇಳೆ ಹೆಲಿಕಾಪ್ಟರ್‌ ಪತನಗೊಂಡಿತ್ತು. ಆದ್ರೆ, ಘಟನೆಗೆ ಕಾರಣ ತಿಳಿದುಬಂದಿಲ್ಲ.

Share Post