ನವದೆಹಲಿ; ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ತಾಯಿ ಪಾವೊಲಾ ಮೈನೋ ಅವರು ಇಟಲಿಯಲ್ಲಿ ವಿಧಿವಶರಾಗಿದ್ದಾರೆ. ಈ ಬಗ್ಗೆ ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಸೋನಿಯಾ ಗಾಂಧಿಯವರ ತಾಯಿ ಪಾವೊಲಾ ಮೈನೋ ಅವರು ಆಗಸ್ಟ್ 27 ಶನಿವಾರದಂದು ಇಟಲಿಯಲ್ಲಿರುವ ಅವರ ಮನೆಯಲ್ಲಿ ನಿಧನರಾದರು. ನಿನ್ನೆ ಅಂತ್ಯಕ್ರಿಯೆ ನಡೆಯಿತು ಎಂದು ಟ್ವೀಟ್ ಮಾಡಿದ್ದಾರೆ.
ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಕಳೆದ ವಾರ ಇಟಲಿಗೆ ತೆರಳಿದ್ದರು. ಸೋನಿಯಾ ಜೊತೆ ರಾಹುಲ್, ಪ್ರಿಯಾಂಕಾ ಗಾಂಧಿ ವಿದೇಶಕ್ಕೆ ತೆರಳಿದ್ದರು.