ಸ್ಪೈಸ್ ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ; ಕರಾಚಿಯಲ್ಲಿ ತುರ್ತು ಭೂಸ್ಪರ್ಶ
ಇಸ್ಲಾಮಾಬಾದ್; ದೆಹಲಿಯಿಂದ ದುಬೈಗೆ ಹೋಗುತ್ತಿದ್ದ ಸ್ಪೈಸ್‌ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದ ಇಂಡಿಕೇಟರ್ ಲೈಟ್ ಸಮರ್ಪಕವಾಗಿ ಕಾರ್ಯ ನಿರ್ವಹಿಸಿಲ್ಲ. ಇದರಿಂದಾಗಿ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಯನ್ನು ಘೋಷಿಸದೇ ವಿಮಾನವನ್ನು ಸಾಮಾನ್ಯ ಲ್ಯಾಂಡಿಂಗ್ ಮಾಡಲಾಗಿದೆ. ವಿಮಾನದಲ್ಲಿ ಯಾವುದೇ ಅಸಮರ್ಪಕ ಕಾರ್ಯದ ಬಗ್ಗೆ ಈ ಹಿಂದೆ ವರದಿಯಾಗಿಲ್ಲ. ಪ್ರಯಾಣಿಕರಿಗೆ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ ಎಂದು ಏರ್‌ಲೈನ್‌ನ ವಕ್ತಾರರು ತಿಳಿಸಿದ್ದಾರೆ.